2B ಮೀಸಲಾತಿ ರದ್ದು: ಸರ್ಕಾರದ ನಡೆಗೆ ಮುಸ್ಲಿಮ್ ಸಮುದಾಯದಿಂದ ಆಕ್ರೋಶ, ಕಾನೂನು ಸಮರಕ್ಕೆ ಸಿದ್ಧತೆ?
2 ಬಿ ಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ 4 ರಷ್ಟು ಮೀಸಲಾತಿಯನ್ನು ರದ್ದುಗೊಳಿಸಲಾಗಿದ್ದು, 2 ಬಿಯಲ್ಲಿದ್ದ ಮುಸ್ಲಿಮರನ್ನು ಆರ್ಥಿಕ ಹಿಂದುಳಿದ ವರ್ಗಗಳ ಗೆ ವರ್ಗಾವಣೆ ಮಾಡಲಾಗಿದೆ. ಸರ್ಕಾರದ ಈ ನಡೆಗೆ ಮುಸ್ಲಿಮರಿಮದ ವಿರೋಧ ವ್ಯಕ್ತವಾಗಿದೆ.
2 ಬಿ ಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ 4 ರಷ್ಟು ಮೀಸಲಾತಿಯನ್ನು ರದ್ದುಗೊಳಿಸಲಾಗಿದ್ದು, 2 ಬಿಯಲ್ಲಿದ್ದ ಮುಸ್ಲಿಮರನ್ನು ಆರ್ಥಿಕ ಹಿಂದುಳಿದ ವರ್ಗಗಳ ಗೆ ವರ್ಗಾವಣೆ ಮಾಡಲಾಗಿದೆ. ಇನ್ನು ಸರ್ಕಾರದ ಈ ನಡೆಗೆ ಮುಸ್ಲಿಮರಿಮದ ವಿರೋಧ ವ್ಯಕ್ತವಾಗಿದೆ. ಸಂವಿಧಾನ ವಿರೋಧಿ ಕ್ರಮದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಕರ್ನಾಟಕದ ನಾನಾ ಮುಸ್ಲಿಂ ಮುಖಂಡರು ತೀರ್ಮಾನ ಕೈಗೊಂಡಿದ್ದಾರೆ. ಅದಲ್ಲದೆ ರಾಜ್ಯದಲ್ಲಿ ನಾಗನಗೌಡ ಸಮಿತಿಯಿಂದ ಹಿಡಿದು ನ್ಯಾ.ಚಿನ್ನಪ್ಪ ರೆಡ್ಡಿ ಆಯೋಗದವರೆಗೆ ಬಂದಿರುವ ಎಲ್ಲ ಆಯೋಗಗಳೂ ಮುಸ್ಲಿಮರನ್ನು ಹಿಂದುಳಿದ ವರ್ಗ ಎಂದೇ ಗುರುತಿಸಿದೆ. ನ್ಯಾ. ಚಿನ್ನಪ್ಪ ರೆಡ್ಡಿ ಆಯೋಗದ ಅಧ್ಯಯನಪೂರ್ಣ ವರದಿಯ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗದಲ್ಲಿ ಶೇಕಡಾ 4 ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಲಾಗಿದೆ ಹೀಗೆ ರದ್ದು ಪಡಿಸಿರುವುದು ಸಂವಿಧಾನವಿರೋಧಿ ಕ್ರಮ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಮುಸ್ಲಿಂ ಮುಖಂಡರು ತಿಳಿಸಿದ್ದಾರೆ.