Asianet Suvarna News Asianet Suvarna News

5 ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಂಟಿದ ಕೊರೋನಾ ಸೋಂಕು..!

ಬೆಂಗಳೂರು ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿರುವ ವಿಚಾರ ದೃಢಪಟ್ಟಿದೆ. 5 ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೋವಿಡ್ 19 ಸೋಂಕು ತಗುಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಜೂ.20): ಕೊರೋನಾ ರಣಕೇಕೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಲೇ ಇದೆ. ಸೋಂಕು ಹೆಚ್ಚುತ್ತಿರುವುದರ ಜತೆಗೆ ಸಾವಿನ ಸಂಖ್ಯೆಯೂ ಹೆಚ್ಚುತ್ತಿರುವುದು ಉದ್ಯಾನನಗರಿಯ ಜನತೆಯ ನಿದ್ದೆಗೆಡಿಸಿದೆ.

ಈ ಆತಂಕದ ನಡುವೆ ಬೆಂಗಳೂರು ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿರುವ ವಿಚಾರ ದೃಢಪಟ್ಟಿದೆ. 5 ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೋವಿಡ್ 19 ಸೋಂಕು ತಗುಲಿದೆ.

ಆತಂಕ ತಂದಿಟ್ಟ ವೃದ್ಧನ ಸಾವು; ಮನೆಯಲ್ಲಿಟ್ಟು ಬೀಗ ಹಾಕಿದ ಸ್ಥಳೀಯರು

ವಿಕ್ಟೋರಿಯಾ ಆಸ್ಪತ್ರೆಯ ಕಂಟ್ರೋಲ್ ರೂಂನಲ್ಲಿ ಬೆಂಗಳೂರು ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳು ಕೆಲಸ ಮಾಡುತ್ತಿದ್ದರು. ರೋಗಿಗಳ ಎಂಟ್ರಿ ಹಾಗೂ ಡಿಸ್ಚಾರ್ಜ್‌ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದರು. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Video Top Stories