ರಾಜಕೀಯ ಜಾತ್ರೆ ಆಗ್ತಿವೆಯಾ ಸಾಹಿತ್ಯ ಸಮ್ಮೇಳನ? 87ನೇ ಸಾಹಿತ್ಯ ಸಮ್ಮೇಳನದಲ್ಲಿ 6 ನಿರ್ಣಯ ಅಂಗೀಕಾರ!
ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಅಭಿವೃದ್ಧಿಗಾಗಿ ನಿರ್ಣಯ ಅಂಗೀಕರಿಸಲಾಗಿದೆ. ಇನ್ನು ಸಾಹಿತ್ಯ ಸಮ್ಮೇಳನಗಳು ರಾಜಕೀಯದ ಮುಲಾಜಿಗೆ ಬಿದ್ದಿದೆಯಾ ಎನ್ನುವ ಅನುಮಾನ ಕಾಡಲಾರಂಭಿಸಿದೆ.
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ಅದ್ಧೂರಿಯಾಗಿ ತೆರೆ ಬಿದ್ದಿದೆ. ನಾಡಿನ ಮೂಲೆ ಮೂಲೆಗಳಿಂದ ಜನಸಾಗರವೇ ಹರಿದು ಬಂದಿದೆ. ಇನ್ನು 88ನೇ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ.
ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಅಭಿವೃದ್ಧಿಗಾಗಿ ನಿರ್ಣಯ ಅಂಗೀಕರಿಸಲಾಗಿದೆ. ಇನ್ನು ಸಾಹಿತ್ಯ ಸಮ್ಮೇಳನಗಳು ರಾಜಕೀಯದ ಮುಲಾಜಿಗೆ ಬಿದ್ದಿದೆಯಾ ಎನ್ನುವ ಅನುಮಾನ ಕಾಡಲಾರಂಭಿಸಿದೆ.
ಕಸಾಪ 6 ನಿರ್ಣಯಗಳು
ನಿರ್ಣಯ-1: ಕನ್ನಡ ಭಾಷಾ ಅಭಿವೃದ್ಧಿ ಅಧಿನಿಯಮ-2022ರ ಸಮಗ್ರ ಜಾರಿ
ನಿರ್ಣಯ-2: ಸರ್ಕಾರಿ ಕನ್ನಡ ಶಾಲೆಗೆ ಮೂಲ ಸೌಕರ್ಯ, ಶಿಕ್ಷಕರ ಹುದ್ದೆ ಭರ್ತಿ
ನಿರ್ಣಯ-3: ಡಾ.ಸರೋಜಿನಿ ಮಹಿಷಿ ವರದಿ ಅನುಷ್ಠಾನಗೊಳಿಸಬೇಕು
ನಿರ್ಣಯ-4: ಧಾರವಾಡದಲ್ಲಿ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಶೀಘ್ರ ನಡೆಸಬೇಕು
ನಿರ್ಣಯ-5: ರಾಜ್ಯ ಸರ್ಕಾರ ರಾಷ್ಟ್ರಕವಿ ಪ್ರಶಸ್ತಿಯನ್ನು ಶೀಘ್ರವೇ ಘೋಷಿಸಬೇಕು
ನಿರ್ಣಯ-6: 87ನೇ ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ದುಡಿದವರಿಗೆ ಧನ್ಯವಾದ