Asianet Suvarna News Asianet Suvarna News

ಬೆಂಗಳೂರಲ್ಲಿ ಆಪ್ ಅಧಿಕಾರಕ್ಕೆ ಬಂದ್ರೆ ಪ್ರತಿವಾರ್ಡ್‌ಗೆ 3 ಉಚಿತ ಕ್ಲಿನಿಕ್ : ಸಿಸೋಡಿಯಾ

ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಆಮ್ ಅದ್ಮಿ ಪಕ್ಷ ಎಲ್ಲಾ ವಾರ್ಡ್‌ಗಳಲ್ಲಿ ಸ್ಪರ್ಧಿಸುವುದಾಗಿ ದೆಹಲಿ ಡಿಸಿಎಂ ಮನೀಷ್ ಸಿಸೋಡಿಯಾ ತಿಳಿಸಿದ್ದಾರೆ. 
 

ಬೆಂಗಳೂರು (ನ. 12): ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಆಮ್ ಅದ್ಮಿ ಪಕ್ಷ ಎಲ್ಲಾ ವಾರ್ಡ್‌ಗಳಲ್ಲಿ ಸ್ಪರ್ಧಿಸುವುದಾಗಿ ದೆಹಲಿ ಡಿಸಿಎಂ ಮನೀಷ್ ಸಿಸೋಡಿಯಾ ತಿಳಿಸಿದ್ದಾರೆ.

ಸಂಪುಟ ವಿಸ್ತರಣೆ ಕಸರತ್ತು : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಮತ್ತೆ ನಿರಾಸೆ? 

ಬಿಬಿಎಂಪಿ ಎಲ್ಲಾ ವಾರ್ಡ್‌ಗಳಲ್ಲಿ ಆಪ್ ಸ್ಪರ್ದಿಸಲಿದೆ. ನಾವು ಅಧಿಕಾರಕ್ಕೆ ಬಂದರೆ ಪ್ರತಿ ವಾರ್ಡ್‌ಗೆ 3 ಆಪ್ ಕ್ಲಿನಿಕ್ ಶುರುಮಾಡಲಿದ್ದೇವೆ. ಬಿಬಿಎಂಪಿ ಅಧಿಕಾರ ಮೂರೂ ಪಕ್ಷಗಳು ಬೆಂಗಳೂರಿನ ಜನತೆಗೆ ನಯಾಪೈಸೆ ಅನುಕೂಲ ಮಾಡಿಲ್ಲ. ನಮ್ಮ ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸವಿದ್ದು, ನಾವು ಬೆಂಗಳೂರಿನ ಚಿತ್ರಣವನ್ನು ಬದಲಿಸುತ್ತೇವೆ' ಎಂದು ಸಿಸೋಡಿಯಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುವರ್ಣ ನ್ಯೂಸ್‌ ಜೊತೆ ಎಕ್ಸ್‌ಕ್ಲೂಸಿವ್ ಆಗಿ ಮಾತನಾಡಿದ್ದಾರೆ. 

 

Video Top Stories