Asianet Suvarna News Asianet Suvarna News

ದಾವಣಗೆರೆ: ಟೈರ್‌ಗೆ ಬೆಂಕಿ ಹಚ್ಚಿ ರೈತರ ಆಕ್ರೋಶ, ಹೆಚ್ಚಾಗುತ್ತಿದೆ ಪ್ರತಿಭಟನೆ ಕಾವು

ಕೃಷಿ ಮಸೂದೆಯನ್ನು ವಿರೋಧಿಸಿ ಅನ್ನದಾತರು ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. 32 ಕ್ಕೂ ಹೆಚ್ಚು ರೈತ ಸಂಘಟನೆಗಳು ಈ ಹೋರಾಟದಲ್ಲಿ ಭಾಗಿಯಾಗಿವೆ. 

ಬೆಂಗಳೂರು (ಸೆ. 25): ಕೃಷಿ ಮಸೂದೆಯನ್ನು ವಿರೋಧಿಸಿ ಅನ್ನದಾತರು ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. 32 ಕ್ಕೂ ಹೆಚ್ಚು ರೈತ ಸಂಘಟನೆಗಳು ಈ ಹೋರಾಟದಲ್ಲಿ ಭಾಗಿಯಾಗಿವೆ. ದಾವಣಗೆರೆಯಲ್ಲಿ ರೈತರು ಹೆದ್ದಾರಿ ತಡೆದು, ಟೈರ್‌ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ಧಾರೆ. 

ವಾಹನ ಸವಾರರೇ, ಇಂದು ಈ ಹೆದ್ದಾರಿಗಳೆಲ್ಲಾ ಬಂದ್; ಹೊರ ಹೋಗುವಾಗ ಇರಲಿ ಎಚ್ಚರ!

'ನಮಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಸುತ್ತೇವೆ' ಎಂದು ಘೋಷಣೆ ಕೂಗಿದ್ದಾರೆ. ಇತ್ತ ಬೆಂಗಳೂರಿನಲ್ಲಿ ಪ್ರತಿಭಟನೆಯ ಕಾವು ಜೋರಾಗಿದೆ. ಹೆದ್ಧಾರಿಗಳನ್ನು ತಡೆದು ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.