ಮಂಗಳೂರು: ಮೆಡಿಕಲ್‌ ಸೀಟ್‌ ಹಂಚಿಕೆಯಲ್ಲಿ ಭಾರೀ ಅಕ್ರಮ: ತನಿಖೆಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಸೂಚನೆ

ಜಿಲ್ಲೆಯಲ್ಲಿ ಎಂಬಿಬಿಎಸ್ ಮೆಡಿಕಲ್ ಸೀಟ್ ಹೆಸರಿನಲ್ಲಿ ಭಾರೀ ಅಕ್ರಮ ನಡೆದಿದೆ. ಮಂಗಳೂರಿನ ಜಿ.ಆರ್.ಮೆಡಿಕಲ್ ಕಾಲೇಜು ಹೆಸರಿನಲ್ಲಿ ಸರ್ಕಾರದ ಅನುಮತಿಯನ್ನೇ ಪಡೆಯದೆ ನೂರಾರು ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್ ಮಾರಾಟ ಮಾಡಿದ ಆರೋಪ ಕೇಳಿ ಬಂದಿದೆ.

First Published Aug 13, 2023, 5:46 PM IST | Last Updated Aug 13, 2023, 5:46 PM IST

ಮಂಗಳೂರು (ಆ.13): ಜಿಲ್ಲೆಯಲ್ಲಿ ಎಂಬಿಬಿಎಸ್ ಮೆಡಿಕಲ್ ಸೀಟ್ ಹೆಸರಿನಲ್ಲಿ ಭಾರೀ ಅಕ್ರಮ ನಡೆದಿದೆ. ಮಂಗಳೂರಿನ ಜಿ.ಆರ್.ಮೆಡಿಕಲ್ ಕಾಲೇಜು ಹೆಸರಿನಲ್ಲಿ ಸರ್ಕಾರದ ಅನುಮತಿಯನ್ನೇ ಪಡೆಯದೆ ನೂರಾರು ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್ ಮಾರಾಟ ಮಾಡಿದ ಆರೋಪ ಕೇಳಿ ಬಂದಿದೆ. ಸದ್ಯ ಈಗ ಈ ಬಗ್ಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಸಮಗ್ರ ತನಿಖೆಗೆ ಸೂಚಿಸಿದೆ. ಈ ಪ್ರಕರಣವನ್ನು ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಆಯೋಗ ಪತ್ರ ಬರೆದಿದೆ. ಮಂಗಳೂರಿನ ನೀರುಮಾರ್ಗದಲ್ಲಿ ಎರಡು ವರ್ಷಗಳ ಹಿಂದೆ ಜಿ.ಆರ್.ಮೆಡಿಕಲ್ ಕಾಲೇಜು ಆರಂಭವಾಗಿತ್ತು. ಈಗ ಲಕ್ಷಾಂತರ ಶುಲ್ಕ ತೆತ್ತು ಪ್ರವೇಶ ಪಡೆದ 150 ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಅನುಮತಿ‌ ಇಲ್ಲದೇ ಸೀಟು ನೀಡಿರುವುದು ಅಕ್ರಮ ಮತ್ತು ಕಾನೂನು ಬಾಹಿರ ಎಂದು ವರದಿಯಾಗಿದೆ. 2022-23 ಸಾಲಿಯಲ್ಲಿ 150 ವಿದ್ಯಾರ್ಥಿಗಳಿಗೆ ಎಂ.ಬಿ.ಬಿ.ಎಸ್ ದಾಖಲಾತಿ ನೀಡಲಾಗಿದೆ. 2021-22ರಲ್ಲಿ ಎಂಎಆರ್ಬಿ ಮೆಡಿಕಲ್ ಕಾಲೇಜು ನಡೆಸಲು ಅನುಮತಿ ನೀಡಿತ್ತು.