ಅಮಿತ್ ಶಾ ರಾಜ್ಯಕ್ಕೆ, ಸಂಪುಟ ವಿಸ್ತರಣೆ, ಪುನಾರಚನೆ ಬಗ್ಗೆ ಅಭಿಪ್ರಾಯ ಸಂಗ್ರಹ
ಮುಂಬರುವ ವಿಧಾನಸಭಾ ಚುನಾವಣೆಗೆ (Assembly Election 2023) ಈಗಿನಿಂದಲೇ ಭರದ ಸಿದ್ಧತೆಗೆ ಚಾಲನೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ರಾಜ್ಯ ಬಿಜೆಪಿಯ ಪದಾಧಿಕಾರಿಗಳ ಹಾಗೂ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಗೆ (Assembly Election 2023) ಈಗಿನಿಂದಲೇ ಭರದ ಸಿದ್ಧತೆಗೆ ಚಾಲನೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ರಾಜ್ಯ ಬಿಜೆಪಿಯ ಪದಾಧಿಕಾರಿಗಳ ಹಾಗೂ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ.
ಇದೀಗ ಮಂಗಳವಾರ ಅಧಿಕೃತ ಇತರ ಕಾರ್ಯಕ್ರಮಗಳ ನಿಮಿತ್ತ ಆಗಮಿಸುತ್ತಿರುವ ಅವರು ಅಂದು ಮಧ್ಯಾಹ್ನ 3 ಗಂಟೆಗೆ ಮತ್ತೊಮ್ಮೆ ಕೋರ್ ಕಮಿಟಿ ಸಭೆಯ ಜೊತೆಗೆ ರಾಜ್ಯ ಪದಾಧಿಕಾರಿಗಳ ಸಭೆ ನಡೆಸಿ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ ಎನ್ನಲಾಗಿದೆ.
ಇದೇ ವೇಳೆ ಬಹು ನಿರೀಕ್ಷಿತ ಸಂಪುಟ ಕಸರತ್ತಿನ ಬಗ್ಗೆಯೂ ರಾಜ್ಯ ನಾಯಕರ ಅಭಿಪ್ರಾಯ ಪಡೆದುಕೊಳ್ಳಲಿರುವ ಅಮಿತ್ ಶಾ ಅವರು ದೆಹಲಿಗೆ ತಲುಪಿದ ಬಳಿಕ ಪ್ರಮುಖ ನಿರ್ಣಯ ಕೈಗೊಳ್ಳುವ ಸಂಭವವಿದೆ ಎಂದು ತಿಳಿದು ಬಂದಿದೆ.