ರಾಜ್ಯದಲ್ಲಿ ಅಮಿತ್ ಶಾ ಮಿಂಚಿನ ಸಂಚಾರ, 3 ಜಿಲ್ಲೆಗಳ 4 ಕಾರ್ಯಕ್ರಮಗಳಲ್ಲಿ ಭಾಗಿ

ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್‌ ಶಾ (Amit Shah) ಇಂದು ರಾಜ್ಯದಲ್ಲಿ ಮಿಂಚಿನ ಸಂಚಾರ ಮಾಡಲಿದ್ದು, ಒಂದೇ ದಿನದಲ್ಲಿ 4 ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. 
 

Share this Video
  • FB
  • Linkdin
  • Whatsapp

ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್‌ ಶಾ (Amit Shah) ಇಂದು ರಾಜ್ಯದಲ್ಲಿ ಮಿಂಚಿನ ಸಂಚಾರ ಮಾಡಲಿದ್ದು, ಒಂದೇ ದಿನದಲ್ಲಿ 4 ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. 

ಶಿವಕುಮಾರ ಶ್ರೀಗಳ 115 ನೇ ಜನ್ಮದಿನ, ಮದುವಣಗಿತ್ತಿಯಂತೆ ಸಿದ್ಧಗೊಂಡಿದೆ ಸಿದ್ದಗಂಗೆ..!

ಇಂದು ತುಮಕೂರಿನಲ್ಲಿ ನಡೆಯುವ ಸಿದ್ದಗಂಗಾ ಮಠದ (Siddaganga Mutt) ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ (Shivakumara Swamiji) ಅವರ 115ನೇ ಜಯಂತಿ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅಲ್ಲಿನ ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ 2ಗಂಟೆಗೆ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ ಮತ್ತು ಸಾರ್ವಜನಿಕ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ನಂತರ ಬೆಂಗಳೂರಿನ ಅರಮನೆ ಆವರಣದಲ್ಲಿ ಆಯೋಜಿಸಿರುವ ಸಹಕಾರ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Related Video