
ಅಮಿತ್ ಶಾ ರಾಜ್ಯ ಪ್ರವಾಸದಿಂದ ಬಿಜೆಪಿಯಲ್ಲಿ ಸಂಚಲನ: ಇಂದು ಸಂಜೆ ಮಹತ್ವದ ಸಭೆ
ಕೇಂದ್ರದ ಗೃಹ ಸಚಿವ ಅಮಿತ್ ಶಾ (Amit Shah) ನೇತೃತ್ವದಲ್ಲಿ ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆ ಮತ್ತು ಪದಾಧಿಕಾರಿಗಳ ಸಭೆ ನಡೆಯಲಿದ್ದು, ಮುಂಬರುವ ಚುನಾವಣೆ ಗುರಿಯಾಗಿಸಿಕೊಂಡು ಪಕ್ಷ ಸಂಘಟನೆಯ ಬಗ್ಗೆ ಹಲವು ಸಲಹೆ ಸೂಚನೆಗಳನ್ನು ನೀಡಲಿದ್ದಾರೆ.
ಬೆಂಗಳೂರು (ಮೇ. 03): ಕೇಂದ್ರದ ಗೃಹ ಸಚಿವ ಅಮಿತ್ ಶಾ (Amit Shah) ನೇತೃತ್ವದಲ್ಲಿ ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆ ಮತ್ತು ಪದಾಧಿಕಾರಿಗಳ ಸಭೆ ನಡೆಯಲಿದ್ದು, ಮುಂಬರುವ ಚುನಾವಣೆ ಗುರಿಯಾಗಿಸಿಕೊಂಡು ಪಕ್ಷ ಸಂಘಟನೆಯ ಬಗ್ಗೆ ಹಲವು ಸಲಹೆ ಸೂಚನೆಗಳನ್ನು ನೀಡಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಅವರ ಅಧಿಕೃತ ನಿವಾಸದಲ್ಲಿನ ಭೋಜನ ಕೂಟ ಮುಗಿದ ಬಳಿಕ ಮಧ್ಯಾಹ್ನ 2.50ರಿಂದ ಸಂಜೆ 5 ಗಂಟೆವರೆಗೆ ತಾಜ್ ವೆಸ್ಟೆಂಡ್ ಹೋಟೆಲ್‌ನಲ್ಲಿ ಸುಮಾರು ಎರಡು ತಾಸಿಗೂ ಹೆಚ್ಚು ಕಾಲ ಸುದೀರ್ಘ ಸಭೆ ನಡೆಯಲಿದ್ದು, ಸಂಘಟನೆ ಬಲಪಡಿಸುವ ಹಾದಿಯನ್ನು ವಿವರಿಸಲಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಹೀಗಿರುವಾಗ ನನಗೆ ಗೊತ್ತಿರುವಂತೆ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಹೇಳಿದರು.