Anti Conversion Bill: ವೋಟ್ ಬ್ಯಾಂಕ್‌ಗಾಗಿ ಬಿಜೆಪಿ ಈ ಕಾಯ್ದೆಯನ್ನು ಜಾರಿಗೆ ತರುತ್ತಿದೆ: ಎಚ್‌ಡಿಕೆ
'ತರಾತುರಿಯಲ್ಲಿ ಮತಾಂತರ ನಿಷೇಧಕ್ಕೆ ಹುನ್ನಾರ ಇದು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದಮನ ಮಾಡುವ ಕೆಲಸ. ವೋಟ್ ಬ್ಯಾಂಕ್‌ಗಾಗಿ ತಮ್ಮ ಅಜೆಂಡಾವನ್ನು ಜಾರಿಗೆ ತರುತ್ತಿದ್ದಾರೆ. ಇದರಿಂದ ಬಿಜೆಪಿ ಏನನ್ನೂ ಸಾಧಿಸಿದಂತಾಗುವುದಿಲ್ಲ' ಎಂದು ಎಚ್‌ಡಿಕೆ ಹೇಳಿದ್ದಾರೆ.
ಬೆಂಗಳೂರು (ಡಿ. 22): ರಾಜ್ಯದಲ್ಲಿ ಒತ್ತಾಯ ಅಥವಾ ಆಮಿಷವೊಡ್ಡಿ ಮತಾಂತರ ಮಾಡುವುದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕನಿಷ್ಠ 3 ರಿಂದ 10 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲು ಅವಕಾಶ ಕಲ್ಪಿಸುವ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ-2021’ (Anti Conversion Bill) ಅನ್ನು ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ವಿಧಾನಸಭೆಯಲ್ಲಿ ಮಂಡಿಸಲಾಯಿತು. ಕಾರ್ಯ ಕಲಾಪ ಪಟ್ಟಿ ಪ್ರಸ್ತಾಪಿಸದೆ ಏಕಾಏಕಿ ವಿಧೇಯಕವನ್ನು ಪರ್ಯಾಲೋಚನೆಗೆ ಮಂಡನೆ ಮಾಡಿದ್ದಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
Anti Conversion Bill: ನಾವು ಈ ಮಸೂದೆಯನ್ನು ತಂದೇ ತರುತ್ತೇವೆ: ಬಿಎಸ್‌ವೈ