ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಮುಂದಾದ ಸರ್ಕಾರ
ಧರ್ಮ ದಂಗಲ್ ಮಧ್ಯೆ ಮತ್ತೊಂದು ಸೂಕ್ಷ್ಮ ವಿಚಾರಕ್ಕೆ ಕರ್ನಾಟಕ ಸರ್ಕಾರ ಕೈ ಹಾಕಿದೆ. ವಿಪಕ್ಷಗಳ ವಿರೋಧದ ಮಧ್ಯೆ ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆ ಮೂಲಕ ಜಾರಿ ತರಲು ರಾಜ್ಯ ಸರ್ಕಾರ ಮುಂದಾಗಿದೆ.
ಬೆಂಗಳೂರು, (ಮೇ.12): ಧರ್ಮ ದಂಗಲ್ ಮಧ್ಯೆ ಮತ್ತೊಂದು ಸೂಕ್ಷ್ಮ ವಿಚಾರಕ್ಕೆ ಕರ್ನಾಟಕ ಸರ್ಕಾರ ಕೈ ಹಾಕಿದೆ. ವಿಪಕ್ಷಗಳ ವಿರೋಧದ ಮಧ್ಯೆ ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆ ಮೂಲಕ ಜಾರಿ ತರಲು ರಾಜ್ಯ ಸರ್ಕಾರ ಮುಂದಾಗಿದೆ.
Anti Conversion Bill ಮತಾಂತರ ನಿಷೇಧ ಕಾಯ್ದೆಯಿಂದ ಆತಂಕ: ಕ್ರಿಶ್ಚಿಯನ್ ಸಮುದಾಯ!
ಹೌದು..ಬೆಳಗಾವಿಯಲ್ಲಿ ನಡೆದಿದ್ದ ಅಧಿವೇಶನದಲ್ಲಿ ಕಾಯ್ದೆಯಿಂದ ಸರ್ಕಾರಕ್ಕೆ ಹಿನ್ನಡೆಯಾಗಿತ್ತು. ಆಗ ಆ ಕಾಯ್ದೆಯನ್ನು ಸುಗ್ರವಾಜ್ಞೆ ಮೂಲಕ ತರಲು ನಿರ್ಧರಿಸಿದೆ. ಇಂದಿನಿ (ಗುರುವಾರ) ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆಗೆ ಒಪ್ಪಿಗೆ ಸಿಗುತ್ತಾ ಎನ್ನುವುದನ್ನು ಕಾದುನೋಡಬೇಕಿದೆ.