Asianet Suvarna News Asianet Suvarna News

Anti-Conversion Bill: ಈ ಕಾಯ್ದೆಯನ್ನು ಜಾರಿಗೆ ತರಲು ಹೊರಟಿರೋದ್ಯಾಕೆ ಬಿಜೆಪಿ ಸರ್ಕಾರ.?

ಮುಖ್ಯವಾಗಿ ರಾಜ್ಯ ಸರ್ಕಾರವು ಮತಾಂತರದ ವಿರುದ್ಧ ಕಠಿಣ ಕಾಯಿದೆ (Anti Conversion Bill)  ರೂಪಿಸಲು ಮುಂದಾಗಿದೆ. ಈ ವಿಧೇಯಕವು ಪ್ರಸ್ತುತ ಅಧಿವೇಶನದಲ್ಲೇ ಮಂಡನೆಯಾಗಲಿದೆ. 

ಬೆಂಗಳೂರು (ಡಿ. 14): ಮುಖ್ಯವಾಗಿ ರಾಜ್ಯ ಸರ್ಕಾರವು ಮತಾಂತರದ ವಿರುದ್ಧ ಕಠಿಣ ಕಾಯಿದೆ (Anti Conversion Bill) ರೂಪಿಸಲು ಮುಂದಾಗಿದೆ. ಬಲವಂತ, ಆಮಿಷ ಅಥವಾ ವಂಚಿಸಿ ಮತಾಂತರ ಮಾಡುವವರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವುದು, ಮತಾಂತರವಾಗುವ ವ್ಯಕ್ತಿ ಮೊದಲೇ ಸರ್ಕಾರಕ್ಕೆ ತಿಳಿಸಬೇಕು ಎಂಬುದು ಸೇರಿದಂತೆ ಹಲವು ಕಠಿಣ ಅಂಶಗಳುಳ್ಳ ಮತಾಂತರ ನಿಷೇಧ ಕಾಯಿದೆ ಜಾರಿಗೆ ಕರಡು ಸಿದ್ಧಪಡಿಸಿದೆ.

Anti Conversion Bill: ರಾಜಕೀಯದಲ್ಲಿ ಚರ್ಚೆಯಾಗುತ್ತಿರುವ ಈ ಕಾಯ್ದೆಯಲ್ಲಿರೋ ಅಂಶಗಳೇನು.?

ಈ ವಿಧೇಯಕವು ಪ್ರಸ್ತುತ ಅಧಿವೇಶನದಲ್ಲೇ ಮಂಡನೆಯಾಗಲಿದೆ. ಮತಾಂತರ ನಿಷೇಧ ವಿಧೇಯಕ ಮಂಡಿಸಿದರೆ ಸಂಪೂರ್ಣ ವಿರೋಧ ವ್ಯಕ್ತಪಡಿಸುವುದಾಗಿ ಈಗಾಗಲೇ ಕಾಂಗ್ರೆಸ್‌ ಪಕ್ಷವೂ ಸ್ಪಷ್ಟಪಡಿಸಿದೆ. ಹೀಗಾಗಿ ಮತಾಂತರ ನಿಷೇಧ ಕಾಯಿದೆ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ತೀವ್ರ ಜಟಾಪಟಿ ನಡೆಯುವ ಸಾಧ್ಯತೆ ತಳ್ಳಿಹಾಕುವಂತಿಲ್ಲ. ಹಾಗಾದರೆ ಎರಡೂ ಪಕ್ಷಗಳು ಹಠಕ್ಕೆ ಬಿದ್ದಿರೋದ್ಯಾಕೆ.? ಈ ಕಾಯ್ದೆಯಲ್ಲಿರೋದೇನು.? 
 

Video Top Stories