ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ : ಬೆಂಗಳೂರಲ್ಲಿ ಎಲ್ಲೆಡೆ ಟ್ರಾಫಿಕ್ ಜಾಮ್
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.
ಮಾಸಿಕ ವೇತನ 12 ಸಾವಿರಕ್ಕೆ ಏರಿಕೆ ಮಾಡಬೇಕು ಎಂದು ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಭಟನೆ ನಡೆಸುತ್ತಿದ್ದು, ಪ್ರೀಡಂ ಪಾರ್ಕಿಗೆ ಜಾಥಾ ನಡೆಸಿದ್ದಾರೆ.
ರಾಜ್ಯದ ವಿವಿಧ ಪ್ರದೇಶಗಳಿಂದ ಆಗಮಿಸಿದ ಸಾವಿರಾರು ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಇದರಿಂದ ಬೆಂಗಳೂರಿನ ಹಲವೆಡೆ ಫುಲ್ ಟ್ರಾಫಿಕ್ ಜಾಮ್ ಆಗಿದೆ.
ಬೆಂಗಳೂರು [ಜ.03]: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.
ಮಾಸಿಕ ವೇತನ 12 ಸಾವಿರಕ್ಕೆ ಏರಿಕೆ ಮಾಡಬೇಕು ಎಂದು ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪ್ರೀಡಂ ಪಾರ್ಕಿಗೆ ಜಾಥಾ ನಡೆಸಿದ್ದಾರೆ.
ರಾಜ್ಯದ ವಿವಿಧ ಪ್ರದೇಶಗಳಿಂದ ಆಗಮಿಸಿದ ಸಾವಿರಾರು ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಇದರಿಂದ ಬೆಂಗಳೂರಿನ ಹಲವೆಡೆ ಫುಲ್ ಟ್ರಾಫಿಕ್ ಜಾಮ್ ಆಗಿದೆ.
ಎಂಜಿ ರೋಡ್ ಹೊಸ ವರ್ಷಾಚರಣೆಗೆ ಬೀಳುತ್ತಾ ಬ್ರೇಕ್..?...
ಫ್ರೀಡಂ ಪಾರ್ಕ್ ಸುತ್ತಾ ಮುತ್ತಾ ಟ್ರಾಫಿಕ್ ಜಾಮ್ ಉಂಟಾಗಿದೆ. ಮಹಾರಾಣಿ ಕಾಲೇಜು ರಸ್ತೆ, ಆನಂದ್ ರಾವ್ ಸರ್ಕಲ್, ಎಂಎಸ್ ಬಿಲ್ಡಿಂಗ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಮೌರ್ಯ ಸರ್ಕಲ್ ಮೇಲ್ಸೇತುವೆ ಮೇಲೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಹಂತ ಹಂತವಾಗಿ ವಾಹನಗಳನ್ನ ಸಂಚರಿಸಲು ಪೊಲೀಸರು ಬಿಡುತ್ತಿದ್ದಾರೆ.