36ನೇ ರಾಜ್ಯ ಪತ್ರಕರ್ತರ ಸಮ್ಮೇಳನ: ಕನ್ನಡ ಪ್ರಭ- ಸುವರ್ಣ ನ್ಯೂಸ್‌ನ ನಾಲ್ವರಿಗೆ ಪ್ರಶಸ್ತಿ ಪ್ರದಾನ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 36 ನೇ ರಾಜ್ಯ ಸಮ್ಮೇಳನ ಕಲಬುರಗಿಯಲ್ಲಿ (Kalaburagi) ನಡೆಯಿತು. ಸಮ್ಮೇಳನದಲ್ಲಿ ಪತ್ರಿಕಾ ರಂಗದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗಿದ್ದು, ಕನ್ನಡ ಪ್ರಭ- ಸುವರ್ಣ ನ್ಯೂಸ್‌ನ ನಾಲ್ವರು ಸಿಬ್ಬಂದಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಂಗಳೂರು (ಜ. 05): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 36 ನೇ ರಾಜ್ಯ ಸಮ್ಮೇಳನ ಕಲಬುರಗಿಯಲ್ಲಿ (Kalaburagi) ನಡೆಯಿತು. ಸಮ್ಮೇಳನದಲ್ಲಿ ಪತ್ರಿಕಾ ರಂಗದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗಿದ್ದು, ಕನ್ನಡ ಪ್ರಭ- ಸುವರ್ಣ ನ್ಯೂಸ್‌ನ ನಾಲ್ವರು ಸಿಬ್ಬಂದಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
36 ನೇ ರಾಜ್ಯ ಪತ್ರಕರ್ತರ ಸಮ್ಮೇಳನ: ಪತ್ರಿಕೋದ್ಯಮಿಗೆ ಸಮಾಜದಲ್ಲಿ ಮಹತ್ವದ ಸ್ಥಾನವಿದೆ: ಬೊಮ್ಮಾಯಿ!
ಇತ್ತೀಚೆಗೆ ಪತ್ರಕರ್ತರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತಿದೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಪತ್ರಿಕೆಗಳ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಬಾರದು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.
ಮಾಧ್ಯಮ ವಿಶ್ವಾಸಾರ್ಹತೆಯ ಬಗ್ಗೆ ಜನರಲ್ಲಿ ಅನುಮಾನಗಳಿವೆ ಎಂದಿರುವ ಕನ್ನಡಪ್ರಭ ಹಾಗೂ ಸುವರ್ಣ ಸುದ್ದಿ ವಾಹಿನಿ ಪ್ರಧಾನ ಸಂಪಾದಕರಾದ ರವಿ ಹೆಗಡೆ, ಕೊರೋನಾ ಸುದ್ದಿಗಳ ಕುರಿತಂತೆಯೇ ಉದಾಹರಣೆ ನೀಡುತ್ತ ಕೊರೋನಾ ಬಗ್ಗೆ ಮಾಧ್ಯಮಗಳು ಅತಿರಂಜಿತ ವರದಿ ಮಾಡುತ್ತಿವೆ. ಸಾಂಕ್ರಾಮಿಕದ ಅಲೆ ಕಾಡಿದಾಗ ಬೆದರಿದ್ದೇದೆ. ಹೀಗಾಗಿ ಮಾಧ್ಯಮಗಳ ವಿಶ್ವಾಸಾರ್ಹತೆ ಬಗ್ಗೆ ವೃಥಾ ಅನುಮಾನಗಳು ಬೇಡ ಎಂದು ಹೇಳಿದ್ದಾರೆ