ಕಾನೂನು ಕೈಗೆತ್ತಿಕೊಂಡರೆ ಕ್ರಮ, ಎಲ್ಲರೂ ಸುಪ್ರೀಂ ಆದೇಶ ಪಾಲಿಸ್ಬೇಕು: ಆರಗ ಜ್ಞಾನೇಂದ್ರ ಎಚ್ಚರಿಕೆ

*ಕಾನೂನು ಕೈಗೆ ತೆಗೆದುಕೊಳ್ಳುವವರ ವಿರುದ್ಧ ಕಠಿಣ ಕ್ರಮ
*ನ್ಯಾಯಾಲಯದ ಆದೇಶವನ್ನು ಎಲ್ಲರೂ ಗೌರವಿಸಬೇಕು
*ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಸೂಕ್ತ ಕ್ರಮ: ಆರಗ ಜ್ಞಾನೇಂದ್ರ

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 09): ಆಜಾನ್ VS ಸುಪ್ರಭಾತ ಅಭಿಯಾನ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ಮಸೀದಿಗಳಲ್ಲಿನ ಅಜಾನ್‌ಗೆ ವಿರುದ್ಧವಾಗಿ ಈ ಹಿಂದೆ ಘೋಷಿಸಿದಂತೆ ರಾಜ್ಯಾದ್ಯಂತ ಹಿಂದೂ ದೇವಾಲಯಗಳಲ್ಲಿ ಸೋಮವಾರ ಹನುಮಾನ್‌ ಚಾಲೀಸಾ, ಸುಪ್ರಭಾತ, ಭಕ್ತಿಗೀತೆ, ಭಜನೆ, ನಾಸಿಕ್‌ ಡೊಳ್ಳು, ಸಮಾಳ, ಶಂಖ, ಜಾಗಟೆಗಳ ಸದ್ದು ಮೊಳಗಿದೆ. ಈ ನಡುವೆ "ಕಾನೂನು ಕೈಗೆ ತೆಗೆದುಕೊಳ್ಳುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಮುತಾಲಿಕ್ ರನ್ನ ಒದ್ದು ಒಳಗಡೆ ಹಾಕ್ಬೇಕು ಎಚ್‌ ಡಿ ಕುಮಾರಸ್ವಾಮಿ 

ನ್ಯಾಯಾಲಯದ ಆದೇಶವನ್ನು ಎಲ್ಲರೂ ಗೌರವಿಸಬೇಕು ಎಂದಿರುವ ಆರಗ ಜ್ಞಾನೇಂದ್ರ ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಮಸೀದಿಯಲ್ಲಿ ಆಜಾನ್‌ ಮೈಕ್‌ಗಳನ್ನು ಮೇ 8ರ ಒಳಗೆ ತೆರವುಗೊಳಿಸಬೇಕು ಇಲ್ಲವಾದಲ್ಲಿ ಮೇ 9ರಂದು ರಾಜ್ಯದ ಸಾವಿರಕ್ಕೂ ಅಧಿಕ ದೇವಾಲಯಗಳಲ್ಲಿ ಹನುಮಾನ್‌ ಚಾಲೀಸ, ಸುಪ್ರಭಾತ, ಭಕ್ತಿಗೀತೆಗಳನ್ನು ಹಾಕಲಾಗುವುದು ಎಂದು ಶ್ರೀರಾಮ ಸೇನೆ ಸಂಘಟನೆ ಎಚ್ಚರಿಕೆ ನೀಡಿತ್ತು. ಈ ಗಡುವು ಮುಗಿದ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ ಅಭಿಯಾನ ಆರಂಭಿಸಿದೆ.

Related Video