Weekend Curfew : ವ್ಯಾಪಾರ-ವಹಿವಾಟು ಇಲ್ಲದೆ ವ್ಯಾಪಾರಸ್ಥರು ಕಂಗಾಲು
ರಾಜ್ಯಾದ್ಯಂತ ಜಾರಿಯಲ್ಲಿರುವ ವೀಕೆಂಡ್ ಕರ್ಫ್ಯೂ
ಹಬ್ಬದ ಸಮಯದಲ್ಲೂ ನಡೆಯದ ವ್ಯಾಪಾರ
ಹೂ, ಹಣ್ಣು, ತರಕಾರಿ ಮಾರುಕಟ್ಟೆ ಖಾಲಿ ಖಾಲಿ
ಬೆಂಗಳೂರು (ಜ. 15): ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ವ್ಯಾಪಕವಾಗಿ ಏರಿಕೆ ಕಾಣುತ್ತಿರುವ ನಡುವೆ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ವೀಕೆಂಡ್ ಕರ್ಫ್ಯೂ 2ನೇ ವಾರಕ್ಕೆ ಕಾಲಿಟ್ಟಿದೆ. ಆದರೆ, ಸರ್ಕಾರದ ವೀಕೆಂಡ್ ಕರ್ಫ್ಯೂ ನಿರ್ಧಾರ ಬಡ ಜನರ ಹೊಟ್ಟೆ ಮೇಲೆ ಹೊಡೆದಂತಾಗಿದೆ. ಸಂಕ್ರಾಂತಿ ಸಮಯದಲ್ಲಿ ದೊಡ್ಡ ಮಟ್ಟದ ವ್ಯಾಪಾರದ ನಿರೀಕ್ಷೆಯಲ್ಲಿದ್ದ ಹೂವು, ಹಣ್ಣು, ತರಕಾರಿ ವ್ಯಾಪಾರಸ್ಥರಿಗೆ ಸರ್ಕಾರದ ನಿರ್ಧಾರದಿಂದ ದೊಡ್ಡ ಮಟ್ಟದ ಸಂಕಷ್ಟಕ್ಕೆ ಸಿಲುಕಿದ್ದಾರೆ.
Karnataka Covid 19 Relief: ಕೋವಿಡ್-19 ಕೇಸ್ ಹೆಚ್ಚಳ, ಆಸ್ಪತ್ರೆಗೆ ದಾಖಲಾತಿ ತೀರಾ ಕಡಿಮೆ
ಬಾಗಲಕೋಟೆಯಲ್ಲಿ ವೀಕೆಂಡ್ ಕರ್ಫ್ಯೂಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಜನರ ಓಡಾಟ ಇಲ್ಲದೆ, ಹೂ, ಹಣ್ಣು, ತರಕಾರಿ ಮಾರುಕಟ್ಟೆಗಳು ಖಾಲಿ ಖಾಲಿಯಾಗಿ ಕಾಣುತ್ತಿದೆ. ರಸ್ತೆ ರಸ್ತೆಯಲ್ಲೂ ಖಾಕಿ ಸರ್ಪಗಾವಲು ಕಾಣುತ್ತಿದೆ. ವ್ಯಾಪಾರ ಇಲ್ಲದೆ ತರಕಾರಿಗಳು ಕೊಳೆಯುತ್ತಿವೆ. ನಮ್ಮ ನಷ್ಟಗಳನ್ನು ಯಾರು ಭರಿಸುತ್ತಾರೆ ಎಂದು ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ. ಅಗತ್ಯ ವಸ್ತುಗಳ ಖರೀದಿಗೆ ಮಾತ್ರವೇ ಅವಕಾಶ ನೀಡಲಾಗಿದ್ದು, ಸುಖಾಸುಮ್ಮನೆ ರೋಡಿಗೆ ಇಳಿಯುವ ವಾಹನಗಳನ್ನು ಪೊಲೀಸರು ಸೀಝ್ ಮಾಡುತ್ತಿದ್ದಾರೆ.