ಬಳ್ಳಾರಿ ಬಾಣಂತಿಯರ ಸಾವಿನ ತನಿಖಾ ವರದಿಯೂ ಬಂತು; ಆದ್ರೂ ಸಚಿವ ಜಮೀರ್ ಬರಲಿಲ್ಲ!

ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಭೇಟಿ ನೀಡಿದ್ದಾರೆ. ಆದರೆ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಮಾತ್ರ ಈವರೆಗೂ ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಿಲ್ಲ. ಇದರಿಂದ ಸಚಿವರ ವಿರುದ್ಧ ಅಸಮಾಧಾನ ಭುಗಿಲೆದ್ದಿದೆ.

Share this Video
  • FB
  • Linkdin
  • Whatsapp

ಬಳ್ಳಾರಿ (ಡಿ.05): ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ವಿರೋಧ ಪಕ್ಷದ ನಾಯಕರು ಬಂದು ಹೋದರು. ಈ ಪ್ರಕರಣದ ತನಿಖೆಗೆ ಸರ್ಕಾರ ಅದೇಶ ಮಾಡಿದೆ. ಮೃತಪಟ್ಟವರಿಗೆ ಪರಿಹಾರವನ್ನು ಘೋಷಣೆ ಮಾಡಿದೆ. ಆದರೆ, ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಮಾತ್ರ ಈವರೆಗೂ ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಿಲ್ಲ. ಬಾಣಂತಿಯರ ಸಾವಿನ ನಂತರ ಜಿಲ್ಲೆಗೆ ಬಾರದ ಸಚಿವ ಜಮೀರ ಅಹ್ಮದ ವಿರುದ್ಧ ಅಸಮಾಧಾನ ಭುಗಿಲೆದ್ದಿದೆ. ಹೀಗಾಗಿ, ಬಿಜೆಪಿ ವಿಪಕ್ಷ ನಾಯಕ ಆರ್. ಅಶೋಕ ಅವರು ಆಡಳಿತ ಪಕ್ಷದ ಕಾರ್ಯವೈಖರಿ ಪರಿಶೀಲನೆಗೆ ಮುಂದಾಗಿದ್ದಾರೆ.

ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಹಿನ್ನೆಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆಯೇ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ನಿನ್ನೆ ಜೆಡಿಎಸ್ ನಾಯಕರು ಭೇಟಿ ನೀಡಿದ್ದಾರೆ. ಆದರೆ, ಬಳ್ಳಾರಿಯಲ್ಲಿ ಬಾಣಂತಿ ಯರ ಸಾವು ಸಂಭವಿಸಿದ್ದರು ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಮಾತ್ರ ಈವರೆಗೆ ತಿರುಗಿಯೂ ನೋಡಿಲ್ಲ. ಸಂತ್ರಸ್ತರ ಕುಟುಂಬಕ್ಕೆ ಸಾಂತ್ವನ ಹೇಳುವುದು ಹಾಗೂ ಪರಿಹಾರ ಕೊಡಿಸುವ ಕಾರ್ಯವನ್ನೂ ಮಾಡಿಲ್ಲ. ಇನ್ನು ಎನ್‌ಡಿಎ ನಾಯಕರ ಭೇಟಿ ಬಳಿಕವಾದರೂ ಎಚ್ಚೆತ್ತುಕೊಳ್ಳದೇ ದಿವ್ಯ ನಿರ್ಲಕ್ಷ್ಯ ತೋರಿಸ್ದಾರೆ.

ಇದನ್ನೂ ಓದಿ: ಬೆಳಗಾವಿ: ಮಗಳನ್ನು ಪ್ರೀತಿಸಲು ನಿರಾಕರಿಸಿದ ತಾಯಿ, ಮಗನ ಬರ್ಬರ ಹತ್ಯೆ

ಈಗಾಗಲೇ ಬಾಣಂತಿಯರನ್ನು ಕಳೆದುಕೊಂಡು ನೋವಿನಲ್ಲಿರೋ ಕುಟುಂಬಗಳು, ಜಿಲ್ಲಾ ಉಸ್ತುವಾರಿ ಸಚಿವರ ನಿರ್ಲಕ್ಷಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. ಸಂಡೂರು ಉಪ ಚುನಾವಣೆಯಲ್ಲಿ ಜಿಲ್ಲೆಯಲ್ಲಿಯೇ ಮಲಗಿ ಎದ್ದೇಳುತ್ತಿದ್ದ ಜಿಲ್ಲಾ ಉಸ್ತುವಾರಿ ಜಮೀರ್ ಈಗ ಜನರು ಕಷ್ಟವೆಂದಾಗ ಏಕೆ ಬರುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಪ್ರತಿಪಕ್ಷಗಳಾದ ಎನ್‌ಡಿಎ ನಾಯಕರು ಪ್ರತಿಬಾರಿ ಬಳ್ಳಾರಿಗೆ ಭೇಟಿ ನೀಡಿದಾಗಲೆಲ್ಲಾ ಉಸ್ತುವಾರಿ ಸಚಿವನಿಗೆ ಬಾಯಿ ತುಂಬಾ ಬೈದು ಬರುತ್ತಿದ್ದಾರೆ.

Related Video