Belagavi Riot: ಕನ್ನಡ ಹೋರಾಟಗಾರರ ಮೇಲೆ ಸರ್ಕಾರದ ಪ್ರತಾಪ ಬೇಡ: ಎಚ್‌ಡಿಕೆ

ಕಿತ್ತೂರು ರಾಣಿ ಚನ್ನಮ್ಮ (Kittur Rani Channamma)  ಅವರ ಜತೆಗೂಡಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡಿದ್ದ ಕನ್ನಡನಾಡಿನ ಹೆಮ್ಮೆಯ ಪುತ್ರ ಸಂಗೊಳ್ಳಿ ರಾಯಣ್ಣ (Sangolli Rayanna) ಅವರ ಪ್ರತಿಮೆಯನ್ನು ವಿರೂಪಗೊಳಿಸಿರುವುದು ದೇಶಕ್ಕೆ ಎಸಗಿದ ದ್ರೋಹ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ.

First Published Dec 19, 2021, 5:49 PM IST | Last Updated Dec 19, 2021, 5:49 PM IST

ಬೆಂಗಳೂರು (ಡಿ. 19):  ಕಿತ್ತೂರು ರಾಣಿ ಚನ್ನಮ್ಮ (Kittur Rani Channamma)  ಅವರ ಜತೆಗೂಡಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡಿದ್ದ ಕನ್ನಡನಾಡಿನ ಹೆಮ್ಮೆಯ ಪುತ್ರ ಸಂಗೊಳ್ಳಿ ರಾಯಣ್ಣ (Sangolli Rayanna) ಅವರ ಪ್ರತಿಮೆಯನ್ನು ವಿರೂಪಗೊಳಿಸಿರುವುದು ಅತ್ಯಂತ ಖಂಡನೀಯ. ಇದು ಕನ್ನಡಿಗರಿಷ್ಟೇ ಮಾಡಿದ ದ್ರೋಹವಲ್ಲ, ಇಡೀ ದೇಶಕ್ಕೆ ಎಸಗಿದ ದ್ರೋಹ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ.

Belagavi Riot: ಕೆಲವರ ಪುಂಡಾಟದಿಂದ ಅಮಾಯಕರಿಗೆ ತೊಂದರೆ, ಸರ್ಕಾರ ಕ್ರಮ ಕೈಗೊಳ್ಳಲಿ: ಡಾಲಿ

' ಕತ್ತಲಾದ ಮೇಲೆ ಕಳ್ಳರಂತೆ ನುಸುಳಿ ವಾಹನಗಳಿಗೆ ಕಲ್ಲು ಹೊಡೆಯುವುದು ಹೇಡಿತನ. ಮಹಾನ್ ರಾಷ್ಟ್ರಪ್ರೇಮಿ, ಕೆಚ್ಚದೆಯ ವೀರರಾದ ರಾಯಣ್ಣ ಅವರ ಪ್ರತಿಮೆಗೆ ಹಾನಿ ಮಾಡಿದ್ದು ನಿಜವಾದ ವಿಕೃತ. ಮಹಾರಾಷ್ಟ್ರ ಮುಖ್ಯಮಂತ್ರಿಗಳು ಇದನ್ನೆಲ್ಲ ಸಮರ್ಥನೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ. ವಿಕೃತ ಮನಸ್ಸು ಯಾರದ್ದು ಎನ್ನುವುದು ಉದ್ಧವ್ ಠಾಕ್ರೆ ಅವರು ಅರ್ಥ ಮಾಡಿಕೊಂಡರೆ ಉತ್ತಮ. ನಿಮಗೆ ಶಿವಾಜಿ ಹೇಗೆ ಮುಖ್ಯರೋ, ನಮಗೆ ಸಂಗೊಳ್ಳಿ ರಾಯಣ್ಣ ಅವರು ಹಾಗೆಯೇ ಪೂಜ್ಯರು. ಈ ವಿಷಯ ನಿಮಗೆ ಅರ್ಥವಾಗಲಿಲ್ಲ, ಯಾಕೆ? ಬೆಳಗಾವಿಯಲ್ಲಿ ಬೇರೆಯವರು ಬೇಳೆ ಬೇಯಿಸಿಕೊಳ್ಳುವುದು ಬೇಡ. ನಮ್ಮ ಹೆಮ್ಮೆಯ ಕಲಿ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ದೇಶ ದ್ರೋಹಿಗಳಿಗೆ ತಕ್ಕ ಪಾಠ ಕಲಿಸುವುದು ಬಿಟ್ಟು ಕನ್ನಡಪರ ಹೋರಾಟಗಾರರ ಮೇಲೆ ರಾಜ್ಯ ಸರಕಾರ ಪ್ರತಾಪ ತೋರಿಸುವುದು ಬೇಡ' ಎಂದಿದ್ದಾರೆ.