Belagavi Riot: ಪುಂಡರ ಮೇಲೆ ಗೂಂಡಾಕಾಯ್ದೆ, ದೇಶದ್ರೋಹ ಕೇಸ್, ಮತಾಂತರ ನಿಷೇಧಕ್ಕೆ ಅಸ್ತು

 ಸಂಗೊಳ್ಳಿ ರಾಯಣ್ಣ (Sangolli Rayanna) ಶಿವಾಜಿ (Shivaji) ಪ್ರತಿಮೆಗೆ ಅವಮಾನ ಮಾಡಿದವರ ವಿರುದ್ಧ ಗೂಂಡಾಕಾಯ್ದೆಯಡಿ ಕ್ರಮ ಕೈಗೊಳ್ಳಲು ಸಿಎಂ ಆದೇಶಿಸಿದ್ದಾರೆ. ಎಂಇಎಸ್ ನಿಷೇಧ ಕುರಿತು ಕಾನೂನಾತ್ಮಕವಾಗಿ ಪರಿಶೀಲಿಸಲಾಗುವುದು, ನಿರ್ಬಂಧ ವಿಧಿಸಲು ಸಾಧ್ಯವಾಗದಿದ್ರೆ ಸಂಪೂರ್ಣ ನಿಯಂತ್ರಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. 

 

First Published Dec 21, 2021, 9:47 AM IST | Last Updated Dec 21, 2021, 9:47 AM IST

ಬೆಂಗಳೂರು (ಡಿ. 21): ಸಂಗೊಳ್ಳಿ ರಾಯಣ್ಣ (Sangolli Rayanna) ಶಿವಾಜಿ (Shivaji) ಪ್ರತಿಮೆಗೆ ಅವಮಾನ ಮಾಡಿದವರ ವಿರುದ್ಧ ಗೂಂಡಾಕಾಯ್ದೆಯಡಿ ಕ್ರಮ ಕೈಗೊಳ್ಳಲು ಸಿಎಂ ಆದೇಶಿಸಿದ್ದಾರೆ. ಎಂಇಎಸ್ ನಿಷೇಧ ಕುರಿತು ಕಾನೂನಾತ್ಮಕವಾಗಿ ಪರಿಶೀಲಿಸಲಾಗುವುದು, ನಿರ್ಬಂಧ ವಿಧಿಸಲು ಸಾಧ್ಯವಾಗದಿದ್ರೆ ಸಂಪೂರ್ಣ ನಿಯಂತ್ರಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. 

ರಾಜ್ಯದಲ್ಲಿ ಒತ್ತಾಯ ಅಥವಾ ಆಮಿಷವೊಡ್ಡಿ ಮತಾಂತರ (Anti Conversion Bill) ಮಾಡುವುದನ್ನು ನಿಷೇಧಿಸಲು, ಮತಾಂತರ ಆರೋಪ ಸಾಬೀತಾದರೆ ಕನಿಷ್ಠ 3ರಿಂದ 10 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲು ಅವಕಾಶ ಕಲ್ಪಿಸುವ ‘ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಮಸೂದೆ - 2021’ಕ್ಕೆ ಸೋಮವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಮಂಗಳವಾರ ಅಥವಾ ಬುಧವಾರ ಸದನದಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ.