ಸ್ಫೋಟಕ ಮಾಹಿತಿ ಹೊರಹಾಕಿದ ಸಿಎಂ ಯಡಿಯೂರಪ್ಪ..!
ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಕೊರೋನಾ ತಡೆಗೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಅಧಿಕಾರಿಗಳು-ಪೊಲೀಸರು ಕೊರೋನಾ ತಡೆಗೆ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಶುಕ್ರವಾರ(ಜು.10)ದಂದು ಪತ್ರಿಕಾಘೋಷ್ಠಿ ಕರೆದಿದ್ದು, ಈ ಕುರಿತಂತೆ ವಿವರವಾಗಿ ತಿಳಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರು(ಜು.09): ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಕೊರೋನಾ ಕಂಟ್ರೋಲ್ ಕೈತಪ್ಪಿ ಹೋಗಿದೆ ಎಂದು ಸ್ವತಃ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.
ರಾಜ್ಯದ ಶಕ್ತಿಸೌಧವಾದ ವಿಧಾನಸೌಧದಲ್ಲಿ ಸಿಎಂ ಬಿಎಸ್‌ವೈ ಇಂತಹದ್ದೊಂದು ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ. ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಕೊರೋನಾ ತಡೆಗೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಅಧಿಕಾರಿಗಳು-ಪೊಲೀಸರು ಕೊರೋನಾ ತಡೆಗೆ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಶುಕ್ರವಾರ(ಜು.10)ದಂದು ಪತ್ರಿಕಾಘೋಷ್ಠಿ ಕರೆದಿದ್ದು, ಈ ಕುರಿತಂತೆ ವಿವರವಾಗಿ ತಿಳಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಕೃಷ್ಣಾ ಐತೀರ್ಪು ಗೆಜೆಟ್ ಆದೇಶಕ್ಕೆ ಕೇಂದ್ರದ ಮೇಲೆ ಒತ್ತಡ: ಸಚಿವ ರಮೇಶ್ ಜಾರಕಿಹೊಳಿ
ಬೆಂಗಳೂರಿನಲ್ಲಿ ಎಷ್ಟೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡರೂ ಕೂಡಾ ಪ್ರತಿದಿನ ಸಾವಿರದ ಲೆಕ್ಕದಲ್ಲಿ ಕೊರೋನಾ ಪತ್ತೆಯಾಗುತ್ತಿವೆ. ಹೀಗಾಗಿ ಸಿಎಂ ನಾಳೆ ಯಾವೆಲ್ಲಾ ಘೋಷಣೆಗಳನ್ನು ಮಾಡಬಹುದು ಎನ್ನುವುದು ಈಗ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.