ನಮ್ಮ ಸರ್ಕಾರ ಬಂದ್ರೆ ಬೇಡಿಕೆ ಈಡೇರಿಸೋದಾಗಿ ಹೇಳಿದ್ದ ಕಾಂಗ್ರೆಸ್ ನಾಯಕರು ಉಲ್ಟಾ ಹೊಡೆದಿದ್ದಾರೆ: ಆಟೋ ಚಾಲಕರ ಆಕ್ರೋಶ
ಬಿಜೆಪಿ ಸರ್ಕಾರದ ವೇಳೆ ಪ್ರತಿಭಟನೆ ಮಾಡಿದಾಗ, ನಮ್ಮ ಸರ್ಕಾರ ಬಂದರೆ ಬೇಡಿಕೆ ಈಡೇರಿಸುವುದಾಗಿ ಹೇಳಿದ್ದ ಕಾಂಗ್ರೆಸ್ ನಾಯಕರು, ಈಗ ಅಧಿಕಾರಕ್ಕೆ ಬಂದರೂ ಬೇಡಿಕೆ ಈಡೇರಿಸುತ್ತಿಲ್ಲ.
ಬೆಂಗಳೂರು (ಸೆ.11): ಕಳೆದ ಒಂದು ವಾರದಿಂದಲೂ ಪ್ರತಿಯೊಬ್ ವಾಹನ ಚಾಲಕರಿಗೂ ಪ್ರತಿಭಟನೆಯ ಬಗ್ಗೆಯೂ ನಾವು ಮಾಹಿತಿ ತಿಳಿಸಿದ್ದೇವೆ. ಇನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರತಿಭಟನೆ ಮಾಡಿದಾಗ, ನಾವು ಪ್ರತಿಭಟನೆ ಮಾಡುತ್ತಿದ್ದ ಜಾಗಕ್ಕೆ ಬಂದಿದ್ದ ಕಾಂಗ್ರೆಸ್ ನಾಯಕರು ನಮ್ಮ ಸರ್ಕಾರಕ್ಕೆ ಅಧಿಕಾರಕ್ಕೆ ಬಂದರೆ ನಿಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದ್ದರು. ಆದರೆ, ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೂ ಕೂಡ ನಮ್ಮ ಬೇಡಿಕೆಯನ್ನು ಈಡೇರಿಸದೇ ಉಡಾಫೆ ಮಾಡುತ್ತಿದ್ದಾರೆ. ಸಾರಿಗೆ ಇಲಾಖೆ ಅಧಿಕಾರಿಗಳು ಕೇವಲ ಕಂಪನಿಗಳ ಗುಲಾಮರಾಗಿದ್ದಾರೆ. ಬೈಕ್ ಟ್ಯಾಕ್ಸಿಗಳಿಗೆ ಅವಕಾಶ ಮಾಡಿಕೊಡಿ ಎಂದು ಹೇಳಿದರೂ ಕೇಳುತ್ತಿಲ್ಲ. ಬೈಕ್ ಟ್ಯಾಕ್ಸಿಯನ್ನು ಬಂದ್ ಮಾಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೇ ಹೇಳಿದ್ದರು. ಈಗ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಉಲ್ಟಾ ಹೊಡೆಯುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.