ಪಾದರಾಯನಪುರ ಪುಂಡರನ್ನು ಬಂಧಿಸಿದ ಸಿಸಿಬಿ ಪೊಲೀಸರಿಗೆ ಶುರುವಾಯ್ತು ಆತಂಕ..!
ಪಾದರಾಯನಪುರದಲ್ಲಿ ಘಟನೆ ನಡೆದ ದಿನವೇ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಸಿಬ್ಬಂದಿಗಳನ್ನು ಕ್ವಾರಂಟೈನ್‌ಗೆ ಒಳಪಡಿಸುವ ಚಿಂತನೆ ನಡೆಸಲಾಗಿತ್ತು. ಆದರೆ ಆ ಬಳಿಕ ಈ ನಿರ್ಧಾರದಿಂದ ಹಿಂದೆ ಸರಿದಿದ್ದರು ಎನ್ನಲಾಗಿದೆ.
ಬೆಂಗಳೂರು(ಏ.24): ಕೊರೋನಾ ವಾರಿಯರ್ಸ್ ವಿರುದ್ಧ ಗೂಂಡಾಗಿರಿ ತೋರಿದ್ದ ಪಾದರಾಯನಪುರ ಪುಂಡರನ್ನು ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದರು. ಆದರೆ ಈಗ ಪಾದರಾಯನಪುರದಲ್ಲಿ ಕರ್ತವ್ಯ ನಿರ್ವಹಿಸಿದವರಿಗೆ ಆತಂಕ ಶುರುವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಪಾದರಾಯನಪುರದಲ್ಲಿ ಘಟನೆ ನಡೆದ ದಿನವೇ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಸಿಬ್ಬಂದಿಗಳನ್ನು ಕ್ವಾರಂಟೈನ್‌ಗೆ ಒಳಪಡಿಸುವ ಚಿಂತನೆ ನಡೆಸಲಾಗಿತ್ತು. ಆದರೆ ಆ ಬಳಿಕ ಈ ನಿರ್ಧಾರದಿಂದ ಹಿಂದೆ ಸರಿದಿದ್ದರು ಎನ್ನಲಾಗಿದೆ.
ಕೊರೋನಾ ಸೋಂಕಿತ ವೃದ್ದೆ ಸಾವು: ಶವ ಸಂಸ್ಕಾರಕ್ಕೆ ಸ್ಥಳೀಯರಿಂದ ವಿರೋಧ..!
ಪಾದರಾಯನಪುರದಲ್ಲಿ ಕರ್ತವ್ಯ ನಿರ್ವಹಿಸಿದ್ದ ಪೊಲೀಸರು ಹಾಗೂ ಸಿಬ್ಬಂದಿಗಳನ್ನು ಕ್ವಾರಂಟೈನ್‌ಗೆ ಒಳಪಡಿಸಲು ಪೊಲೀಸ್ ಇಲಾಖೆ ಚಿಂತನೆ ನಡೆಸುತ್ತಿದೆ. ಪಾದರಾಯನಪುರ ಪುಂಡರಿಗೂ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಹಾಗೂ ಪಾದರಾಯನಪುರ ಪೊಲೀಸರಿಗೆ ಆತಂಕ ಶುರುವಾಗಿದೆ.