ಚಾಮರಾಜಪೇಟೆ ಈದ್ಗಾ ವಿವಾದ: ಸಂಧಾನ ವಿಫಲ, ಜುಲೈ 12 ರಂದು ಬಂದ್

ಚಾಮರಾಜಪೇಟೆ ಆಟದ ಮೈದಾನ ಸಾರ್ವಜನಿಕರ ಆಸ್ತಿ ಹಾಗೂ ಮಕ್ಕಳ ಆಟದ ಮೈದಾನವಾಗಿ ಉಳಿಯಬೇಕೆಂದು ಆಗ್ರಹಿಸಿ ಜು.12ರಂದು ಸ್ಥಳೀಯ ನಿವಾಸಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳು ಬಂದ್‌ಗೆ ಕರೆ ನೀಡಿವ ಹಿನ್ನೆಲೆಯಲ್ಲಿ ಶಾಸಕ ಜಮೀರ್‌ ಅಹಮದ್‌ ಖಾನ್‌ ಬಿಬಿಎಂಪಿ ಮಾಜಿ ಸದಸ್ಯರು ಹಾಗೂ ಸ್ಥಳೀಯ ಮುಖಂಡರ ಜೊತೆ  ಸಭೆ ನಡೆಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜು. 09): ಚಾಮರಾಜಪೇಟೆ ಆಟದ ಮೈದಾನ ಸಾರ್ವಜನಿಕರ ಆಸ್ತಿ ಹಾಗೂ ಮಕ್ಕಳ ಆಟದ ಮೈದಾನವಾಗಿ ಉಳಿಯಬೇಕೆಂದು ಆಗ್ರಹಿಸಿ ಜು.12 ರಂದು ಸ್ಥಳೀಯ ನಿವಾಸಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳು ಬಂದ್‌ಗೆ ಕರೆ ನೀಡಿವ ಹಿನ್ನೆಲೆಯಲ್ಲಿ ಶಾಸಕ ಜಮೀರ್‌ ಅಹಮದ್‌ ಖಾನ್‌ ಬಿಬಿಎಂಪಿ ಮಾಜಿ ಸದಸ್ಯರು ಹಾಗೂ ಸ್ಥಳೀಯ ಮುಖಂಡರ ಜೊತೆ ಸಭೆ ನಡೆಸಿದ್ದಾರೆ. 

ಸಿದ್ದರಾಮಯ್ಯ- ಡಿಕೆಶಿ ದಿಢೀರ್ ಭೇಟಿ, ಬ್ರೇಕ್‌ಫಾಸ್ಟ್ ಮೀಟಿಂಗ್..!

ಚಾಮರಾಜಪೇಟೆಯ ಆಟದ ಮೈದಾನ ಇಂದು, ನಿನ್ನೆಯದಲ್ಲ. ನಾನು ಹುಟ್ಟುವ ಪೂರ್ವದಿಂದಲೂ ಇದೆ. ಮುಂದೆಯೂ ಇರುತ್ತದೆ. ಆಟದ ಮೈದಾನ ಉಳಿಸಿ ಎಂದು ಬೊಬ್ಬೆ ಹಾಕುತ್ತ ಜುಲೈ 12ರಂದು ಚಾಮರಾಜಪೇಟೆ ಬಂದ್‌ಗೆ ಕರೆ ನೀಡಿರುವ ಕಿಡಿಗೇಡಿಗಳು ಈ ಕ್ಷೇತ್ರದವರಲ್ಲ. ನಾನು ಅಧಿಕಾರದಲ್ಲಿ ಇರುವವರೆಗೂ ಆಟದ ಮೈದಾನ ತೆಗೆಯುವ ಪ್ರಶ್ನೆಯೇ ಇಲ್ಲ. ವಿಕೃತ ಮನಸುಗಳಿಗೆ ಸುಳ್ಳು ಸುದ್ದಿ ಹಬ್ಬಿಸಿ, ತಮ್ಮ ಬೇಳೆ ಬೇಯಿಸಿಕೊಳ್ಳಲು ಚಾಮರಾಜಪೇಟೆ ಕ್ಷೇತ್ರದ ಜನತೆ ಅವಕಾಶ ನೀಡುವುದಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದರು. ಜಮೀರ್ ಮಾತಿಗೆ ನಾಗರೀಕರು ಒಪ್ಪಿಗೆ ಸೂಚಿಸಿಲ್ಲ. 

Related Video