
Towing Issue: ಅತಿರೇಕದ ವರ್ತನೆ ಸರಿಯಲ್ಲ, ಜನಸ್ನೇಹಿ ಮಾಡಲಿದ್ದೇವೆ: ಸಿಎಂ
ನೋ ಪಾರ್ಕಿಂಗ್ ಸ್ಥಳದಲ್ಲಿನ ವಾಹನಗಳನ್ನು ಟೋಯಿಂಗ್ ಮಾಡುವ ವ್ಯವಸ್ಥೆ ಪುನರ್‌ಪರಿಶೀಲನೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದಾರೆ.
ಬೆಂಗಳೂರು (ಜ. 31): ನೋ ಪಾರ್ಕಿಂಗ್ (No Parking) ಸ್ಥಳದಲ್ಲಿನ ವಾಹನಗಳನ್ನು ಟೋಯಿಂಗ್ (Towing)ಮಾಡುವ ವ್ಯವಸ್ಥೆ ಪುನರ್‌ಪರಿಶೀಲನೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಟೋಯಿಂಗ್ ನಡೆಸುವ ವೇಳೆ ಅತಿರೇಕದ ವರ್ತನೆಯ ದೂರುಗಳು ಬರುತ್ತಿವೆ. ಈ ಹಿಂದೆ ಟೋಯಿಂಗ್ ವ್ಯವಸ್ಥೆ ಪೊಲೀಸ್ ಇಲಾಖೆಯ ಬಳಿಯೇ ಇತ್ತು. ಈಗಿರುವ ವ್ಯವಸ್ಥೆ ಪುನರ್ ಪರಿಶೀಲನೆ ನಡೆಸಲಾಗುವುದು. ಸಾರ್ವಜನಿಕರು ಸಹ ಕಾನೂನಿನ ಪ್ರಕಾರ ನಡೆದುಕೊಳ್ಳಬೇಕು. ಅದರಂತೆ ಕಾನೂನು ರಕ್ಷಣೆ ಮಾಡುವವರು ಸಾರ್ವಜನಿಕರೊಂದಿಗೆ ಸೌಹಾರ್ದಯುತವಾಗಿ ವರ್ತಿಸಬೇಕು. ಅತಿರೇಕದ ವರ್ತನೆ ಮಾಡುವುದು ಸರಿಯಲ್ಲ. ಈ ಬಗ್ಗೆ ಪೊಲೀಸ್ ಆಯುಕ್ತರು, ಪೊಲೀಸ್ ಮಹಾನಿರ್ದೇಶಕರು, ಸಂಚಾರಿ ಪೊಲೀಸ್ ಅಧಿಕಾರಿಗಳ ಸಭೆ ಕರೆದು ಸಂಪೂರ್ಣ ಪುನರ್ ಪರಿಶೀಲನೆ ನಡೆಸಲು ನಿರ್ಧರಿಸಲಾಗಿದೆ. ಹಲವು ಬದಲಾವಣೆ ತಂದು ಜನಸ್ನೇಹಿಯಾಗಿ ಮಾಡಲಿದ್ದೇವೆ ಎಂದು ಭರವಸೆ ನೀಡಿದರು.