ಪೈಗಂಬರ್ ಅವಹೇಳನ ಆರೋಪ: ಡಿಜೆಹಳ್ಳಿ, ಕೆಜೆಹಳ್ಳಿ ಗಲಭೆ ಪೂರ್ವ ನಿಯೋಜಿತ ಕೃತ್ಯ?
ಇಸ್ಲಾಂ ಧರ್ಮ ಗುರು ಮಹಮ್ಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ ಎಂದು ರಾಜಧಾನಿಯ ಕಾವಲ್ ಬೈರಸಂದ್ರದಲ್ಲಿ ಮಂಗಳವಾರ ರಾತ್ರಿ ವ್ಯಾಪಕ ಹಿಂಸಾಚಾರ ನಡೆದಿದೆ.
ಬೆಂಗಳೂರು (ಆ. 12): ಇಸ್ಲಾಂ ಧರ್ಮ ಗುರು ಮಹಮ್ಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ ಎಂದು ರಾಜಧಾನಿಯ ಕಾವಲ್ ಬೈರಸಂದ್ರದಲ್ಲಿ ಮಂಗಳವಾರ ರಾತ್ರಿ ವ್ಯಾಪಕ ಹಿಂಸಾಚಾರ ನಡೆದಿದೆ.
ಇದೊಂದು ಪೂರ್ವ ನಿಯೋಜಿತ ಕೃತ್ಯವೆಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಈ ದಾಂಧಲೆ ಹಿಂದೆ ಯಾರ ಕೈವಾಡವಿದ್ದರೂ ಅವರ ವಿರುದ್ಧ ಕಾನೂನಾತ್ಮಕ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪೈಗಂಬರ್ ಅವಹೇಳನ ಆರೋಪ, ಬೆಂಗಳೂರು ಪೂರ್ವ ಧಗಧಗ: ಗೋಲಿಬಾರ್‌ಗೆ 2 ಬಲಿ!