ಸುವರ್ಣ ನ್ಯೂಸ್ ವಿನೋದ್ ಕುಮಾರ್.ಬಿ.ನಾಯ್ಕ್ ಸೇರಿ ಹಲವರಿಗೆ ಬೆಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ!
ಬೆಂಗಳೂರು ಪ್ರೆಸ್ ಕ್ಲಬ್‌ನ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಸುವರ್ಣ ನ್ಯೂಸ್‌ನ ಪತ್ರಕರ್ತ ವಿನೋದ್ ಕುಮಾರ್ ಬಿ. ನಾಯ್ಕ್ ಸೇರಿ ಹಲವು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಬೆಂಗಳೂರು ಪ್ರೆಸ್ ಕ್ಲಬ್ ನೀಡುವ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿ ಪ್ರದಾನ ಅದ್ದೂರಿಯಾಗಿ ನಡೆಯಿತು. 2024ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರದಾನ ಮಾಡಿದರು. ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿಯನ್ನು ಸಚಿವರಾದ ಕೆ.ಜೆ. ಜಾರ್ಜ್, ಕೆ.ಎಚ್.ಮುನಿಯಪ್ಪ ಹಾಗೂ ಲಕ್ಷ್ಮೀ ಹೆಬ್ಬಾಳ್ಕಾರ್ರವರಿಗೆ ನೀಡಲಾಯಿತು. ಸುವರ್ಣ ಮಹೋತ್ಸವ ಪ್ರಶಸ್ತಿಗೆ ಜಾಣಗೆರೆ ವೆಂಕಟರಾಮಯ್ಯ, ಇಂದೂಧರ ಹೊನ್ನಾಪುರ, ಸುಭಾಷ್ ಕೆವಿನ್ ರೈ, ಜಿ.ಎಸ್.ಕೃಷ್ಣಮೂರ್ತಿ, ಡಾ.ನಾಗೇಶ್ ಬಸವರಾಜ್ ಅವರಿಗೆ ಪ್ರದಾನ ಮಾಡಲಾಯಿತು. ಜೊತೆಗೆ ಏಷ್ಯಾನೆಟ್ ಸುವರ್ಣ ನ್ಯೂಸ್‌ನ ವಿಶೇಷ ಯೋಜನೆಗಳ ಸಂಪಾದಕ ವಿನೋದಕುಮಾರ್ ಬಿ.ನಾಯ್ಕ ಸೇರಿ ಸಾಧಕ ಪತ್ರಕರ್ತರಿಗೆ ಪ್ರೆಸ್‌ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸಿದ ಸಿಎಂ ಸಿದ್ದರಾಮಯ್ಯ: ಈ ಬಾರಿ ರಾಜ್ಯದ ಮೂವರು ಸಚಿವರಿಗೆ ಪ್ರೆಸ್‌ಕ್ಲಬ್ ವಿಶೇಷ ಪ್ರಶಸ್ತಿ ನೀಡಲಾಯಿತು. ಕೆ.ಜೆ. ಜಾರ್ಜ್, ಕೆ.ಎಚ್.ಮುನಿಯಪ್ಪ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಜೊತೆಗೆ, ಜಾಣಗೆರೆ ವೆಂಕಟರಾಮಯ್ಯಗೆ ಸುವರ್ಣ ಮಹೋತ್ಸವ ಪ್ರಶಸ್ತಿ ಹಾಗೂ ಹಲವು ಪತ್ರಕರ್ತರಿಗೆ ಪ್ರೆಸ್‌ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು.