Asianet Suvarna News Asianet Suvarna News

ಬೆಂಗಳೂರಿನಲ್ಲಿ ಭಾನುವಾರ ಮಾತ್ರವಲ್ಲ, ಶನಿವಾರವೂ ಲಾಕ್‌ಡೌನ್?

ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ತೀವ್ರತೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಭಾನುವಾರದ ಲಾಕ್‌ಡೌನ್‌ ಮಾದರಿಯಲ್ಲಿ ಶನಿವಾರವೂ ಲಾಕ್‌ಡೌನ್‌ಗೆ ಬಿಬಿಎಂಪಿ ಸದಸ್ಯರು ಒತ್ತಾಯಿಸಿದ್ದಾರೆ.

ಬೆಂಗಳೂರು (ಜು. 07): ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಸೋಂಕಿನ ತೀವ್ರತೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಭಾನುವಾರದ ಲಾಕ್‌ಡೌನ್‌ ಮಾದರಿಯಲ್ಲಿ ಶನಿವಾರವೂ ಲಾಕ್‌ಡೌನ್‌ಗೆ ಬಿಬಿಎಂಪಿ ಸದಸ್ಯರು ಒತ್ತಾಯಿಸಿದ್ದಾರೆ.

'ಕೊರೊನಾದಿಂದ ಇನ್ನೈದು ತಿಂಗಳು ಇದೇ ಸ್ಥಿತಿ; ಎಲ್ಲರೂ ಫೀಲ್ಡಿಗಿಳಿಯಬೇಕು'; ಆರ್ ಅಶೋಕ್

ನಗರದಲ್ಲಿ ದಿನಕ್ಕೆ ಒಂದು ಸಾವಿರಕ್ಕೂ ಹೆಚ್ಚು ಸೋಂಕು ಪತ್ತೆಯಾಗುತ್ತಿರುವುದರಿಂದ ನಿಯಂತ್ರಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಬಿಬಿಎಂಪಿ ಸದಸ್ಯರ ಅಭಿಪ್ರಾಯ ಪಡೆಯಲು ಸೋಮವಾರ ಕಂದಾಯ ಸಚಿವ ಆರ್‌.ಅಶೋಕ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದೆ. ಭಾನುವಾರದ ಮಾದರಿಯಲ್ಲಿ ಶನಿವಾರವೂ ನಗರದಲ್ಲಿ ಲಾಕ್‌ಡೌನ್‌ ಘೋಷಣೆ ಮಾಡುವಂತೆ ಪಾಲಿಕೆ ಸದಸ್ಯರು ಮನವಿ ಮಾಡಿದ್ದಾರೆ. ಈ ವಿಷಯವನ್ನು ಸಿಎಂ ಯಡಿಯೂರಪ್ಪ ಅವರ ಗಮನಕ್ಕೆ ತಂದು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

Video Top Stories