ಹೈಕೋರ್ಟ್ ಆದೇಶ ಉಲ್ಲಂಘಿಸಿದ್ರೆ ಕಾನೂನು ಕ್ರಮ!

ಧಾರ್ಮಿಕ ಕೇಂದ್ರಗಳಲ್ಲಿ ಧ್ವನಿವರ್ಧಕ ಬಳಕೆ ವಿಚಾರದಲ್ಲಿ ಮಸೀದಿ, ಮಂದಿರಗಳಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದ, ಹೈ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಿದರೆ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಕಮೀಷನರ್ ಕಮಲ್ ಪಂತ್ ಹೇಳಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಏ.5): ಧಾರ್ಮಿಕ ಕೇಂದ್ರಗಳಲ್ಲಿ ಧ್ವನಿವರ್ಧಕ (Loudspeakers) ಬಳಕೆ ವಿಚಾರದಲ್ಲಿ ಈಗಾಗಲೇ ಮಂದಿರ (Temple) ಹಾಗೂ ಮಸೀದಿಗಳಿಗೆ (Mosques) ನೋಟಿಸ್ ನೀಡಲಾಗಿದ್ದು. ಹೈಕೋರ್ಟ್ (High Court) ಆದೇಶದಂತೆ ಕಾರ್ಯನಿರ್ವಹಿಸುತ್ತೇವೆ. ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ಕಮೀಷನರ್ ಕಮಲ್ ಪಂತ್ (Kamal Pant) ಹೇಳಿದ್ದಾರೆ.

ಹೈಕೋರ್ಟ್ ನಿರ್ದೇಶನದಂತೆ ಬೆಂಗಳೂರಿನಲ್ಲಿ ಕೆಲವು ಕಡೆ ಮೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಧರ್ಮದ ಮುಖಂಡರಿಗೂ ಮಾಹಿತಿ ನೀಡಲಾಗಿದೆ ಎಂದಿದ್ದಾರೆ. ಇದೇ ಪ್ರಕರಣದಲ್ಲಿ ಬೆಂಗಳೂರಿನಲ್ಲಿ ಈವರೆಗೂ 40 ಕ್ಕೂ ಅಧಿಕ ಕೇಸ್ ಗಳು ದಾಖಲಾಗಿದೆ ಎಂದು ಹೇಳಿದ್ದಾರೆ. ಹಲವೆಡೆ ಮೈಕ್ ಅನ್ನು ಜಪ್ತಿ ಮಾಡಲಾಗಿದೆ. ಹೈಕೋರ್ಟ್‌ ನಿರ್ದೇಶನದಂತೆ ಪೊಲೀಸರು ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಸೀದಿಗಳ ಧ್ವನಿವರ್ಧಕಗಳ ಬಗ್ಗೆ ತಕರಾರು ತೆಗೆಯುವುದು ಏಕೆ? ಎಚ್‌ಡಿಕೆ ಪ್ರಶ್ನೆ

ಮಂದಿರ, ಮಸೀದಿ ಮಾತ್ರವಲ್ಲದೆ ಕಾರ್ಖಾನೆ ಹಾಗೂ ಪಬ್ ಗಳಿಗೂ ನೋಟಿಸ್ ನೀಡಲಾಗಿದೆ. ಇಷ್ಟೇ ಪ್ರಮಾಣದಲ್ಲಿ ಮಾತ್ರವೇ ಶಬ್ದ ಹೊರಬರಬೇಕು ಎನ್ನುವ ನಿಯಮವಿದೆ ಎಂದು ಹೇಳಿದ್ದಾರೆ.

Related Video