Asianet Suvarna News Asianet Suvarna News

ಭಾರತ್ ಬಂದ್ : ಕಾಂಗ್ರೆಸ್ ಪಕ್ಷ ರೈತರ ಪರವಾಗಿದೆ, ನಮ್ಮ ಬೆಂಬಲವಿದೆ ಎಂದ ಸಿದ್ದರಾಮಯ್ಯ

ರೈತರ ಈ ಹೋರಾಟ ಕಾಂಗ್ರೆಸ್ ಪ್ರೇರಿತವಲ್ಲ. ರೈತರಿಗೆ ಮಾರಕವಾದ ಕಾಯ್ದೆಯನ್ನು ಜಾರಿ ತಂದಿದ್ದಾರೆ. ಕೃಷಿ ಕಾಯ್ದೆಗಳ ವಿರುದ್ಧ ರೈತರು ಹೋರಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ರೈತರ ಪರವಾಗಿದೆ, ನಮ್ಮ ಬೆಂಬಲವಿದೆ : ಮಾಜಿ ಸಿಎಂ ಸಿದ್ದರಾಮಯ್ಯ

Sep 27, 2021, 10:51 AM IST

ಬೆಂಗಳೂರು (ಸೆ. 27): ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ಇಂದು ಭಾರತ್‌ ಬಂದ್‌ಗೆ ಕರೆ ನೀಡಿವೆ. ರೈತರ ಈ ಹೋರಾಟ ಕಾಂಗ್ರೆಸ್ ಪ್ರೇರಿತವಲ್ಲ. ರೈತರಿಗೆ ಮಾರಕವಾದ ಕಾಯ್ದೆಯನ್ನು ಜಾರಿ ತಂದಿದ್ದಾರೆ. ಕೃಷಿ ಕಾಯ್ದೆಗಳ ವಿರುದ್ಧ ರೈತರು ಹೋರಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ರೈತರ ಪರವಾಗಿದೆ, ನಮ್ಮ ಬೆಂಬಲವಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಭಾರತ್ ಬಂದ್ : ಪ್ರಧಾನಿ ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ ಹಾಕಿ ಪ್ರತಿಭಟನೆ

ರೈತ ಸಂಘಟನೆಗಳು ಬಂದ್‌ ಯಶಗೊಳಿಸಲು ಮೈಸೂರು, ಚಾಮರಾಜನಗರ, ಶಿವಮೊಗ್ಗ, ದೊಡ್ಡಬಳ್ಳಾಪುರ, ಮಾಗಡಿ ಸಂಪರ್ಕಿಸುವ ಪ್ರಮುಖ ರಾಜ್ಯ ಹೆದ್ದಾರಿಗಳನ್ನು ಬಂದ್‌ ಮಾಡಲು ನಿರ್ಧರಿಸಿವೆ. ರಾಷ್ಟ್ರೀಯ ಹೆದ್ದಾರಿಗಳಾದ ಬೆಂಗಳೂರು-ಗೋವಾ, ಬೆಂಗಳೂರು-ಹೈದರಾಬಾದ್‌, ಬೆಂಗಳೂರು-ಚೆನ್ನೈ ರಸ್ತೆಗಳಲ್ಲೂ ತಡೆ ಮಾಡಲು ಮುಂದಾಗಿವೆ.