ವಿಪ್ರೋತ್ಸವ 2024: ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆಗೆ ಭಾರ್ಗವ ಭೂಷಣ ಪ್ರಶಸ್ತಿ ಪ್ರದಾನ

ಅಖಿಲ ಭಾರತ ಬ್ರಾಹ್ಮಣ ಮಹಾಸಂಘದಿಂದ ವಿಪ್ರೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ‌ ಮಾಜಿ ಸಚಿವ ಆರ್. ವಿ. ದೇಶಪಾಂಡೆ ದೀಪ‌ ಬೆಳಗುವ ಮೂಲಕ ಚಾಲನೆ ನೀಡಿದ್ರು. ಈ ಬಾರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 7 ಮಂದಿಯನ್ನು ಗೌರವಿಸಲಾಯಿತು. 
 

First Published Dec 8, 2024, 10:53 AM IST | Last Updated Dec 8, 2024, 10:53 AM IST

ಬೆಂಗಳೂರು(ಡಿ.08):  ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘ ಕರ್ನಾಟಕ ರಾಜ್ಯ ಘಟಕದಿಂದ ವಿಪ್ರೋತ್ಸವ ನಡೆಯಿತು. ಕಾರ್ಯಕ್ರಮದಲ್ಲಿ ಸಮುದಾಯದ ಸಾಧಕರಿಗೆ ಭಾರ್ಗವ ಭೂಷಣ ಪ್ರಶಸ್ತಿ ನೀಡಿ ಸನ್ಮಾನಿಸಲಾಯ್ತು.  ಅಖಿಲ ಭಾರತ ಬ್ರಾಹ್ಮಣ ಮಹಾಸಂಘದಿಂದ ವಿಪ್ರೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ‌ ಮಾಜಿ ಸಚಿವ ಆರ್. ವಿ. ದೇಶಪಾಂಡೆ ದೀಪ‌ ಬೆಳಗುವ ಮೂಲಕ ಚಾಲನೆ ನೀಡಿದ್ರು. ಈ ಬಾರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 7 ಮಂದಿಯನ್ನು ಗೌರವಿಸಲಾಯಿತು. 

ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ, ನಟ ಶ್ರೀಧರ್‌, ಉದ್ಯಮಿ ಶೈಲೇಂದ್ರ ಶರ್ಮಾ, ಸಾಹಿತಿ ಬಾಬು ಕೃಷ್ಣಮೂರ್ತಿ, ಜಯತೀರ್ಥ ವಿದ್ಯಾಪೀಠದ ಪಂಡಿತ್ ಸತ್ಯಧ್ಯಾನ ಆಚಾರ್ಯ, ವೈದ್ಯರಾದ ಬಿ. ಎಸ್ ಶ್ರೀಧರ್, ಸುಧೀರ್ ಹೆಗಡೆಗೆ ಭಾರ್ಗವ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ಕೂಡ ಹಾಜರಿದ್ದರು. 

ಬೆಳಗಾವಿ: ಕೋತಿ ಅಟ್ಟಹಾಸಕ್ಕೆ ನಲುಗಿದ ಗ್ರಾಮಸ್ಥರು, ಒಂದೇ ವಾರದಲ್ಲಿ ಮೂವರ ಮೇಲೆ ದಾಳಿ!

ಸಮುದಾಯದ ಶ್ರೇಯೊಭಿವೃದ್ಧಿ ಬಗ್ಗೆ ಚಿಂತನಾ ಸಭೆ ನಡೆಸಲಾಯ್ತು. ಧಾರ್ಮಿಕ, ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಸ್ಥಿತಿಗತಿಗಳ ಚರ್ಚಿಸಿ, ಸಮುದಾಯದ ಸಂಘಟನೆ ಬಲಿಷ್ಟಗೊಳಿಸುವ ಬಗ್ಗೆ ಚರ್ಚಿಸಲಾಯ್ತು. ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಟಿ ರಾಮಚಾರಿ, ರಾಷ್ಟ್ರೀಯ ಕಾರ್ಯದರ್ಶಿ ಗಿರೀಶ ನೀಲಗುಂದ ಸೇರಿ ಹಲವು ಮುಖಂಡರು ಉಪಸ್ಥಿತರಿದ್ರು.

ಬ್ರಾಹ್ಮಣ ಸಮುದಾಯದ ಸಂಘಟನೆ ಸಮಾಜದ ಜನರು ಎಲ್ಲ ಕ್ಷೇತ್ರಗಳಲ್ಲೂ ಬೆಳವಣಿಗೆ ಸಾಧಿಸಲು ಅಗತ್ಯ ಸಹಕಾರ, ಮಾರ್ಗದರ್ಶನ, ಪ್ರೋತ್ಸಾಹ ನೀಡ್ತಾ ಬರ್ತಿದೆ. ಇಂದಿನ ಕಾರ್ಯಕ್ರಮದಲ್ಲೂ ಈ ಸಂಬಂಧ ಗಂಭೀರ ಚಿಂತನೆ ನಡೆಸಲಾಯ್ತು. ಬಲಿಷ್ಠ ಸಮಾಜ ಸಂಘಟನೆ ಬಗ್ಗೆಯೂ ಚರ್ಚೆ ನಡೆಯಿತು.