Asianet Suvarna News Asianet Suvarna News

ಕರ್ನಾಟಕದಲ್ಲಿ ಹಕ್ಕಿಜ್ವರ ಭೀತಿ; ಚಿಕನ್ ತಿನ್ನಲು ಹೊಸ ನಿಯಮ ಜಾರಿ

Jan 6, 2021, 12:40 PM IST

ಬೆಂಗಳೂರು (ಜ. 06): ಕೇರಳದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವುದು ಖಚಿತಗೊಂಡ ಹಿನ್ನೆಲೆಯಲ್ಲಿ ಆ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.

ಶ್ರೀ ಸಾಮಾನ್ಯನಿಗೆ ಸದ್ಯಕ್ಕಿಲ್ಲ ಕೊರೊನಾ ಲಸಿಕೆ! ಮತ್ಯಾವಾಗ? ಕಾರಣ ಇಲ್ಲಿದೆ

 ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳ ಗಡಿಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಪ್ರಾರಂಭಿಸಲಾಗಿದ್ದು, ಗಡಿ ದಾಟುವ ಎಲ್ಲ ವಾಹನಗಳ ಜಂಟಿ ತಪಾಸಣೆ ನಡೆಸಲಾಗುತ್ತಿದೆ. ಕೋಳಿ ಮತ್ತು ಕೋಳಿ ಉತ್ಪನ್ನಗಳು ರಾಜ್ಯಕ್ಕೆ ಪ್ರವೇಶ ಮಾಡುವ ಸಂದರ್ಭದಲ್ಲಿ ಎಲ್ಲ ಪಕ್ಷಿಗಳನ್ನು ಪರಿಶೀಲಿಸಲಾಗುತ್ತಿದೆ. ಕೋಳಿ ಮತ್ತು ಇತರೆ ಪಕ್ಷಿಗಳ ಸಾಗಾಣಿಕೆಯನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.