Bitcoin : ನಲಪಾಡ್ ನಂಟು ವಿಚಾರ - ಕೈನಲ್ಲೀಗ ಸಂಚಲನ
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡಿದ್ದ ಬಿಟ್‌ಕಾಯಿನ್ ಹಗರಣ ಸದ್ಯ ಬಿರುಗಾಳಿಯನ್ನೇ ಎಬ್ಬಿಸಿದೆ. ಹೌದು ಈ ಹಗರಣ ರಾಜಕಾರಣಗಳಲ್ಲಿ ನಡುಕ ಸೃಷ್ಟಿಸಿದೆ. ಈ ಸಂಬಂಧ ತನಿಖೆ ಮುಂದುವರೆದಿದ್ದು, ಅಂತಾರಾಷ್ಟ್ರೀಯ ಹ್ಯಾಕರ್ ಶ್ರೀಕಿ ಜೊತೆ ಯಾರಿಗೆಲ್ಲ ಸಂಪರ್ಕವಿತ್ತೆಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಬೆಂಗಳೂರಿನ ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಹಾಗೂ ಹಾವೇರಿಯ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನ ಜತೆ ಆಪ್ತ ಸ್ನೇಹವಿತ್ತು ಎಂಬ ಸಂಗತಿ ಸಿಸಿಬಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಏಷ್ಯಾನೆಟ್ ಸುವರ್ಣನ್ಯೂಸ್ ವರದಿ ಬೆನ್ನಲ್ಲೇ ಸಂಚಲನ ಉಂಟಾಗಿದೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬುಲಾವ್ ನೀಡಿದ್ದು, ನಲಪಾಡ್ ಅವರನ್ನು ನಿವಾಸಕ್ಕೆ ಕರೆಸಿಕೊಂಡು ಪ್ರಶ್ನೆ ಮಾಡಿದ್ದು, ಇದಕ್ಕೆ ಉತ್ತರಿಸಿದ ನಲಪಾಡ್ ನನಗೂ ಇದಕ್ಕೂ ನಂಟು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು (ನ.11): ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡಿದ್ದ ಬಿಟ್‌ಕಾಯಿನ್ ಹಗರಣ ಸದ್ಯ ಬಿರುಗಾಳಿಯನ್ನೇ ಎಬ್ಬಿಸಿದೆ. ಹೌದು ಈ ಹಗರಣ ರಾಜಕಾರಣಗಳಲ್ಲಿ ನಡುಕ ಸೃಷ್ಟಿಸಿದೆ. ಈ ಸಂಬಂಧ ತನಿಖೆ ಮುಂದುವರೆದಿದ್ದು, ಅಂತಾರಾಷ್ಟ್ರೀಯ ಹ್ಯಾಕರ್ ಶ್ರೀಕಿ ಜೊತೆ ಯಾರಿಗೆಲ್ಲ ಸಂಪರ್ಕವಿತ್ತೆಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಬೆಂಗಳೂರಿನ ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಹಾಗೂ ಹಾವೇರಿಯ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನ ಜತೆ ಆಪ್ತ ಸ್ನೇಹವಿತ್ತು ಎಂಬ ಸಂಗತಿ ಸಿಸಿಬಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ರಾಜ್ಯ ರಾಜಕೀಯದಲ್ಲಿ Bitcoin ಬಿರುಗಾಳಿ, ಶ್ರೀಕಿ ಜೊತೆ ಕೈ ನಾಯಕರ ಮಕ್ಕಳು!