Asianet Suvarna News Asianet Suvarna News

ರಾಜ್ಯ ಸಭಾ ಚುನಾವಣೆ: ಯಾವ ಹೂವು ಯಾರ ಮುಡಿಗೆ..?

ರಾಜ್ಯಸಭೆ ಟಿಕೆಟ್‌ಗೆ ಪ್ರಕಾಶ್ ಶೆಟ್ಟಿ, ನಾಗರಾಜ್, ರಮೇಶ್ ಕತ್ತಿ, ಪ್ರಭಾಕರ್ ಕೋರೆ, ಮುರುಳೀಧರ್ ರಾವ್ ಸಾಕಷ್ಟು ಪೈಪೋಟಿ ನಡೆಸುತ್ತಿದ್ದಾರೆ. ಶನಿವಾರ ಸಂಜೆ ನಡೆಯಲಿರುವ ಬಿಜೆಪಿ ಕೋರ್ ಕಮಿಟಿ ಸಭೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ಬೆಂಗಳೂರು(ಜೂ.06): ಕಮಲ ಪಾಳಯದಲ್ಲಿ ರಾಜಕೀಯ ಗರಿಗೆದರಿದ್ದು, ಶನಿವಾರ ಸಂಜೆ ಬಿಜೆಪಿ ಕಚೇರಿಯಲ್ಲಿ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯಸಭೆಗೆ ಸ್ಪರ್ಧಿಸಲಿರುವ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮವಾಗಲಿದೆ. ಹೀಗಾಗಿ ಎಲ್ಲರ ಚಿತ್ತ ಕೋರ್ ಕಮಿಟಿಯತ್ತ ನೆಟ್ಟಿದೆ.

ಸಭೆಯಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೆ.ಎಸ್. ಈಶ್ವರಪ್ಪ, ವಿಡಿಯೋ ಕಾನ್ಫರೆನ್ಸ್ ಮೂಲಕ ಸದಾನಂದ ಗೌಡ, ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಪಾಲ್ಗೊಳ್ಳಲಿದ್ದಾರೆ.

ಬಿಜೆಪಿ ಶಾಸಕರು ಒಂದುಕಡೆ ಕೂಡೋದೇ ತಪ್ಪಾ?: ಸಚಿವ ಈಶ್ವರಪ್ಪ

ಟಿಕೆಟ್‌ಗಾಗಿ ಆಕಾಂಕ್ಷಿಗಳಿಂದ ತೆರೆಮರೆಯ ಕಸರತ್ತು ಆರಂಭವಾಗಿದೆ. ರಾಜ್ಯಸಭೆ ಟಿಕೆಟ್‌ಗೆ ಪ್ರಕಾಶ್ ಶೆಟ್ಟಿ, ನಾಗರಾಜ್, ರಮೇಶ್ ಕತ್ತಿ, ಪ್ರಭಾಕರ್ ಕೋರೆ, ಮುರುಳೀಧರ್ ರಾವ್ ಸಾಕಷ್ಟು ಪೈಪೋಟಿ ನಡೆಸುತ್ತಿದ್ದಾರೆ. ಬಿಜೆಪಿ ಪಕ್ಷದಿಂದ ಎರಡು ಜನ ಆಯ್ಕೆಯಾಗಲಿದ್ದಾರೆ. ಕಾಂಗ್ರೆಸ್‌ನಿಂದ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹೆಸರು ಅಂತಿಮಗೊಂಡಿದೆ. ಬಿಜೆಪಿಯಲ್ಲಿ ಯಾರಿಗೆ ಟಿಕೆಟ್ ಸಿಗಲಿದೆ ಎನ್ನುವುದು ಇಂದು ಸಂಜೆ ಖಚಿತವಾಗಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ