ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಮಹತ್ವದ ಸಭೆ!

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ವೈಟ್ನರ್ ಸಂಕಷ್ಟ, ಸಚಿವ ಪ್ರಹ್ಲಾದ್ ಜೋಶಿ ಸಹೋದರನ ಬಂಧನ, ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

Share this Video
  • FB
  • Linkdin
  • Whatsapp

ಕರ್ನಾಟಕ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಿಸಿದೆ. ಈ ಪೈಕಿ 3 ವಿಧಾನಸಭಾ ಕ್ಷೇತ್ರಗಳ ಬೈಕಿ 2 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಿಸಿದೆ. ಶಿಗ್ಗಾಂವಿ ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ನೀಡಲಾಗಿದೆ. ಸಂಡೂರಿನಲ್ಲಿ ಬಿಜೆಪಿ ನಾಯಕ ಬಂಗಾರು ಹನುಮಂತುಗೆ ಟಿಕೆಟ್ ನೀಡಲಾಗಿದೆ.ಆದರೆ ಚೆನ್ನಪಟ್ಟಣ ಟಿಕೆಟ್ ಗುದ್ದಾಟ ತೀವ್ರವಾಗಿರುವ ಕಾರಣ ಟಿಕೆಟ್ ಘೋಷಣೆ ಮಾಡಿಲ್ಲ. ಮೂಲಗಳ ಪ್ರಕಾರ ಈ ಸ್ಥಾನ ಜೆಡಿಎಸ್ ಪಾಲಾಗಿದೆ ಎನ್ನಲಾಗುತ್ತಿದೆ. ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ಮಹತ್ವದ ಸಭೆ ನಡೆಸಿ ಅಭ್ಯರ್ಥಿಗಳ ಘೋಷಣೆಗೆ ತಯಾರಿ ನಡೆಸಿದೆ.

Related Video