ಕೇಸರಿ ಪಾಳಯವನ್ನೇ ನಡುಗಿಸಿದ ಪ್ರವೀಣ್ ಹತ್ಯೆ, ಅದೆಷ್ಟು ಚುರುಕಾಗಿದೆ ಪೊಲೀಸ್ ತನಿಖೆ..?
ಪ್ರವೀಣ್ ಬೆಳ್ಳಾರೆಯಲ್ಲಿ ಎಲ್ಲರೊಂದಿಗೆ ಬೆರೆಯುತ್ತಿದ್ದರು. ಹತ್ಯೆಗೆ ಒಳಗಾದ ದಿನ ಮಂಗಳವಾರ ಅಲ್ಲೇ ಮುಸ್ಲಿಂ ಸ್ನೇಹಿತನ ಗೃಹ ಪ್ರವೇಶಕ್ಕೆ ಹೋಗಿ ಬಂದಿದ್ದರು. ಇದು ಅವರ ಸರ್ವಧರ್ಮ ಸಮಭಾವದ ಕಾಳಜಿಯನ್ನು ತೋರಿಸುತ್ತಿತ್ತು ಎಂದು ಅವರ ಆಪ್ತರು ಹೇಳುತ್ತಾರೆ.
ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟೂರು ಹತ್ಯೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಸದಸ್ಯರು ಪಕ್ಷದ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಚಿಕ್ಕಮಗಳೂರು, ಬೆಳಗಾವಿ, ಬಾಗಲಕೋಟೆ, ಹಾಸನ, ತುಮಕೂರು, ಕೊಪ್ಪಳ, ಮೈಸೂರು ಸೇರಿ ಹಲವೆಡೆ ಯುವ ಮೋರ್ಚಾ ಸದಸ್ಯರು ರಾಜೀನಾಮೆ ನೀಡಿದ್ದಾರೆ. ಸುಳ್ಯದ ಬೆಳ್ಳಾರೆಯಲ್ಲಿ ಪ್ರವೀಣ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಸಚಿವರಾದ ಸುನಿಲ್ ಕುಮಾರ್, ಅಂಗಾರ ಅವರಿಗೆ ಧಿಕ್ಕಾರ ಕೂಗಿ ಬಿಸಿ ಮುಟ್ಟಿಸಿದ್ದಾರೆ.
ಪ್ರವೀಣ್ ಹತ್ಯೆ ಕೇಸ್: ಆರೋಪಿಗಳ ಅರೆಸ್ಟ್ ಆದ ಬಳಿಕ ಬೆಳ್ಳಾರೆಯಲ್ಲಿ ಏನೇನಾಯ್ತು..?
ಪ್ರವೀಣ್ ಬೆಳ್ಳಾರೆಯಲ್ಲಿ ಎಲ್ಲರೊಂದಿಗೆ ಬೆರೆಯುತ್ತಿದ್ದರು. ಹತ್ಯೆಗೆ ಒಳಗಾದ ದಿನ ಮಂಗಳವಾರ ಅಲ್ಲೇ ಮುಸ್ಲಿಂ ಸ್ನೇಹಿತನ ಗೃಹ ಪ್ರವೇಶಕ್ಕೆ ಹೋಗಿ ಬಂದಿದ್ದರು. ಇದು ಅವರ ಸರ್ವಧರ್ಮ ಸಮಭಾವದ ಕಾಳಜಿಯನ್ನು ತೋರಿಸುತ್ತಿತ್ತು ಎಂದು ಅವರ ಆಪ್ತರು ಹೇಳುತ್ತಾರೆ.
ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇಬ್ಬರೂ ಪಿಎಫ್‌ಐ ಕಾರ್ಯಕರ್ತರು ಎಂದು ತಿಳಿದುಬಂದಿದೆ. 20 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದೆ.