ಸುಪ್ರೀಂ ಕೋರ್ಟ್ ತೀರ್ಪು ಅಲ್ಲಾಹನು ಬಯಸಿದ ತೀರ್ಪು: ಮುಸ್ಲಿಂ ಮುಖಂಡ
ಅಯೋಧ್ಯೆ ಪ್ರಕರಣಕ್ಕೆ ಸಂಬಂಧಿಸದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಎಲ್ಲಾ ವರ್ಗದವರು ಸ್ವಾಗತಿಸಿದ್ದಾರೆ. ಸುವರ್ಣನ್ಯೂಸ್ ಜೊತೆ ಮಾತನಾಡಿದ ಬಿಜೆಪಿ ಮುಖಂಡ ರಹೀಂ ಉಚ್ಚಿಲ್ ಪ್ರತಿಕ್ರಿಯಿಸಿದ್ದು ಹೀಗೆ...
ಬೆಂಗಳೂರು (ನ.09): ಅಯೋಧ್ಯೆ ಪ್ರಕರಣಕ್ಕೆ ಸಂಬಂಧಿಸದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಎಲ್ಲಾ ವರ್ಗದವರು ಸ್ವಾಗತಿಸಿದ್ದಾರೆ. ಸುವರ್ಣನ್ಯೂಸ್ ಜೊತೆ ಮಾತನಾಡಿದ ಬಿಜೆಪಿ ಮುಖಂಡ ರಹೀಂ ಉಚ್ಚಿಲ್ ಪ್ರತಿಕ್ರಿಯಿಸಿದ್ದು ಹೀಗೆ...
ಭಾರತದ ಇತಿಹಾಸದಲ್ಲಿ ಕಗ್ಗಂಟಾಗಿ ಉಳಿದಿದ್ದ ಅಯೋಧ್ಯೆ ಬಾಬರಿ ಮಸೀದಿ- ರಾಮಮಂದಿರ ವಿವಾದ ಕೊನೆಗೂ ಬಗೆಹರಿದಿದೆ. ಸುಪ್ರೀಂ ಕೋರ್ಟ್‌ನ ಪಂಚ ಪೀಠವು 2.77 ಎಕರೆ ವಿವಾದಿತ ಭೂಮಿಯನ್ನು ರಾಮಜನ್ಮಭೂಮಿ ನ್ಯಾಸಕ್ಕೆ ಸೇರಿದ್ದು ಎಂದು ತೀರ್ಪಿತ್ತಿದೆ. ಮತ್ತೊಂದು ಅರ್ಜಿದಾರ ಸುನ್ನಿ ವಕ್ಫ್ ಬೋರ್ಡ್‌ಗೆ 5 ಎಕರೆ ಭೂಮಿಯನ್ನು ನೀಡಬೇಕೆಂದು ಆದೇಶ ಹೊರಡಿಸಿದೆ.