ಹುಬ್ಬಳ್ಳಿ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷದ ಕುಮ್ಮಕ್ಕು ಎಂದ ಕಟೀಲ್!
ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಹುಬ್ಬಳ್ಳಿ ಗಲಾಟೆಯ ಹಿಂದೆ ಕಾಂಗ್ರೆಸ್ ಪಕ್ಷದ ಕುಮ್ಮಕ್ಕು ಹೆಚ್ಚಿರುವ ಹಾಗೆ ಕಾಣುತ್ತಿದೆ ಎಂದು ಆರೋಪ ಮಾಡಿದ್ದಾರೆ.
ಬೆಂಗಳೂರು (ಏ.19): ಕಾಂಗ್ರೆಸ್ (Congress) ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ (bjp state president nalin kumar kateel ), ಇಡೀ ಹುಬ್ಬಳ್ಳಿ ಗಲಾಟೆಯ ಹಿಂದೆ ಕಾಂಗ್ರೆಸ್ ಪಕ್ಷದ ಕುಮ್ಮಕ್ಕು ಕೆಲಸ ಮಾಡಿದೆ ಎಂದು ಆರೋಪಿಸಿದ್ದಾರೆ. ನಾವು ಪ್ರಚೋದಿಸಿ ಮತ ಕೇಳುವುದಿಲ್ಲ, ಅಭಿವೃದ್ಧಿ ಮುಂದಿಟ್ಟುಕೊಂಡು ಮತ ಕೇಳುತ್ತೇವೆ. ಸಾವಿರ ಜನರನ್ನು ಸೇರಿಸಲು ಒಬ್ಬರಿಂದ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸಣ್ಣ ಪುಟ್ಟ ವಿಚಾರಗಳನ್ನು ದೊಡ್ಡದಾಗಿ ಮಾಡುವ ಪ್ರಯತ್ನ ಮಾಡುತ್ತಿದೆ. ಕೆಜಿ ಹಳ್ಳಿ, ಡಿಜೆಹಳ್ಳಿ, ಶಿವಮೊಗ್ಗ ಬಳಿಕ ಈಗ ಹುಬ್ಬಳ್ಳಿ ಗಲಾಟೆಗೆ ಕಾಂಗ್ರೆಸ್ ಕುಮ್ಮಕ್ಕು ಕೊಟ್ಟಿದೆ. ಇಂಥ ಹಿಂಸಾಚಾರ ನಡೆಯುತ್ತಿದ್ದಲ್ಲಿ ಉತ್ತರ ಪ್ರದೇಶ (Uttar Pradesh), ಮಧ್ಯಪ್ರದೇಶ (Madhya Pradesh) ಮಾದರಿಯಲ್ಲಿ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಕಟೀಲ್ ಎಚ್ಚರಿಸಿದ್ದಾರೆ.
ಹುಬ್ಬಳ್ಳಿ ಗಲಭೆಯಲ್ಲಿ ಆಮಾಯಕರ ಬಂಧನ ಆಗಿಲ್ಲ: ಸಿಎಂ ಬೊಮ್ಮಾಯಿ
ಪೊಲೀಸರ ಮೇಲೆ ಹಲ್ಲೆ, ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡುವ ಗಲಭೆಕೋರರಿಗೆ ಯುಪಿ, ಎಂಪಿ ಮಾದರಿಯೇ ಉತ್ತಮ ಎಂದು ಕಟೀಲ್ ಹೇಳುವ ಮೂಲಕ ಪರೋಕ್ಷವಾಗಿ ರಾಜ್ಯದಲ್ಲೂ ಯುಪಿ ಮಾದರಿಯ ಕಾನೂನನ್ನು ಜಾರಿಗೆ ತರುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.