ಕಲಬುರಗಿ ಪಾಲಿಕೆ ಗದ್ದುಗೆ ಏರಲು ಕಮಲಪಾಳಯ ಸರ್ಕಸ್, ಮೇಯರ್- ಉಪಮೇಯರ್ ಚುನಾವಣೆ ಮುಂದೂಡಿಕೆ!
ಮಹಾನಗರ ಪಾಲಿಕೆಯ ಮೇಯರ್- ಉಪಮೇಯರ್ ಹಾಗೂ ಸ್ಥಾಯಿ ಸಮಿತಿಗಳ ಚುನಾವಣೆ ಮುಂದೂಡಿ ಕಲಬುರಗಿ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು (ನ. 17): ಮಹಾನಗರ ಪಾಲಿಕೆಯ ಮೇಯರ್- ಉಪಮೇಯರ್ ಹಾಗೂ ಸ್ಥಾಯಿ ಸಮಿತಿಗಳ ಚುನಾವಣೆ ಮುಂದೂಡಿ ಕಲಬುರಗಿ (Kalaburagi) ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಇಂದಿನಿಂದ 3 ದಿನ ಬೆಂಗಳೂರು ಟೆಕ್‌ಶೃಂಗ ಸಭೆ, 300 ಕ್ಕೂ ಹೆಚ್ಚು ಕಂಪನಿಗಳು, 5000 ನವೋದ್ಯಮಗಳು ಭಾಗಿ
ವಿಧಾನಪರಿಷತ್ ಚುನಾವಣೆಯಲ್ಲಿ ಜಿಲ್ಲಾಡಳಿತ ಸಕ್ರೀಯವಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಾದೇಶಿಕ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ. ಕಳೆದ ಏಪ್ರಿಲ್‌ನಲ್ಲಿ ಪಾಲಿಕೆ ಸದಸ್ಯರ ಚುನಾವಣೆ ನಡೆದಿತ್ತು. ಕೋವಿಡ್ ನೆಪದಲ್ಲಿ ಮೇಯರ್- ಉಪಮೇಯರ್ ಚುನಾವಣೆ ಘೋಷಣೆ ಮಾಡಿರಲಿಲ್ಲ. ಇದು ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಬೇಕು ಎಂಬ ಉತ್ಸುಕದಲ್ಲಿರುವವರಿಗೆ ಸರ್ಕಾರದ ನಡೆ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಚುನಾವಣೆ ನಡೆದು 7 ತಿಂಗಳ ಬಳಿಕ ಮೇಯರ್- ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿಗೊಳಿಸಿ ಸರ್ಕಾರ ಅಧಿಸೂಚನೆ ಹೊರಡಿಸಿತ್ತು.