ಗೋವಾದಲ್ಲಿ ಬಿಜೆಪಿಯದ್ದೇ ಸರ್ಕಾರ, ಡಿಕೆಶಿ, ಜಾರಕಿಹೋಳಿ ಏನೂ ಮಾಡೋಕೆ ಆಗಲ್ಲ: ಸಿಟಿ ರವಿ

ಇಂದು ಗೋವಾ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳಲಿದೆ.  ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿಗಳನ್ನ ನಾಯಕರು ಹಿಡಿದಿಟ್ಟುಕೊಂಡ ವಿಚಾರವಾಗಿ, ಗೋವಾ‌ ಬಿಜೆಪಿ ಚುನಾವಣೆ ಉಸ್ತುವಾರಿ ಸಿ.ಟಿ.ರವಿ ಕಾಂಗ್ರೆಸ್ ಗೆ ಟಾಂಗ್ ಕೊಟ್ಟಿದ್ದಾರೆ. 

Share this Video
  • FB
  • Linkdin
  • Whatsapp

ಇಂದು ಗೋವಾ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳಲಿದೆ. ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿಗಳನ್ನ ನಾಯಕರು ಹಿಡಿದಿಟ್ಟುಕೊಂಡ ವಿಚಾರವಾಗಿ, ಗೋವಾ‌ ಬಿಜೆಪಿ ಚುನಾವಣೆ ಉಸ್ತುವಾರಿ ಸಿ.ಟಿ.ರವಿ ಕಾಂಗ್ರೆಸ್ ಗೆ ಟಾಂಗ್ ಕೊಟ್ಟಿದ್ದಾರೆ. 

Add Asianetnews Kannada as a Preferred SourcegooglePreferred

5 States Election: 4 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ, ಅಶ್ವತ್ಥ್ ನಾರಾಯಣ್ ವಿಶ್ವಾಸ

ಕಾಂಗ್ರೆಸ್ ಗೆ ತನ್ನ ಅಭ್ಯರ್ಥಿಗಳ ಬಗ್ಗೆ ನಂಬಿಕೆ ಇಲ್ಲ, ಅದಕ್ಕಾಗಿ ಅವರನ್ನ ಹಿಡಿದಿಟ್ಟುಕೊಂಡಿದೆ. ಚುನಾವಣೆ ಸಂದರ್ಭದಲ್ಲಿ ಆಣೆ ಪ್ರಮಾಣ ಮಾಡಿಸಿದರು, ಈಗ ಕೂಡಿ ಹಾಕಿದ್ದಾರೆ. ಏನೇ ಮಾಡಿದರೂ ಗೋವಾದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಡಿಕೆ ಶಿವಕುಮಾರ್, ಸತೀಶ್ ಜಾರಕಿಹೋಳಿ ಬಂದ ದಾರಿಗೆ ಸುಂಕವಿಲ್ಲದಂತೆ ವಾಪಸ್ ಹೋಗಬೇಕು. ಇಲ್ಲಿ ಇವರು ಏನೂ ಮಾಡಲು ಆಗಲ್ಲ. ಕರ್ನಾಟಕದಲ್ಲಿ ಅವರ ಪಕ್ಷದ ಶಾಸಕರನ್ನ ಉಳಿಸಿಕೊಳ್ಳಲು ಆಗಲಿಲ್ಲ ಇವರಿಗೆ. ಈಗ ಗೋವಾಗೆ ಬಂದು ಏನು ಮಾಡುತ್ತಾರೆ. ಕಾಂಗ್ರೆಸ್ ಗೆ ರಾಜೀನಾಮೆ ಕೊಡಬೇಕು ಅಂತ ತೀರ್ಮಾನ ಮಾಡಿದ್ದರೆ 10 ಡಿಕೆಶಿ, 10 ಸತೀಶ್ ಜಾರಕಿಹೋಳಿ ಬಂದ್ರೂ ತಡೆಯಲು ಸಾಧ್ಯವಿಲ್ಲ ಎಂದು ಸಿ.ಟಿ.ರವಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. 

Related Video