ಪ್ರವೀಣ್ ಹಂತಕರನ್ನು ಶೀಘ್ರದಲ್ಲೇ ಬಂಧಿಸ್ತೇವೆ, ಶಾಂತಿ ಕಾಪಾಡಿ: ಗೃಹ ಸಚಿವ

ಬೆಳ್ಳಾರೆಯಲ್ಲಿ ಬಿಜೆಪಿಯ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಎಂಬವರ ಮೇಲೆ ಅಪರಿಚಿತ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಪ್ರವೀಣ್‌ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಮೃತಪಟ್ಟಘಟನೆ ನಡೆದಿದೆ.

First Published Jul 27, 2022, 11:05 AM IST | Last Updated Jul 27, 2022, 11:05 AM IST

ಬೆಳ್ಳಾರೆಯಲ್ಲಿ ಬಿಜೆಪಿಯ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಎಂಬವರ ಮೇಲೆ ಅಪರಿಚಿತ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಪ್ರವೀಣ್‌ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಮೃತಪಟ್ಟಘಟನೆ ನಡೆದಿದೆ. 

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿರುವ ಪ್ರವೀಣ್‌ ನೆಟ್ಟಾರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದರು. ಮಂಗಳವಾರ ರಾತ್ರಿ ಸುಮಾರು 9 ಗಂಟೆಗೆ ಅವರ ಅಂಗಡಿ ಬಳಿ ಬೈಕ್‌ನಲ್ಲಿ ಬಂದ ಮೂವರು ಹಿಂದಿನಿಂದ ದಾಳಿ ನಡೆಸಿ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಬಿಜೆಪಿ ಮುಖಂಡನ ಬರ್ಬರ ಹತ್ಯೆ: ದುಷ್ಕರ್ಮಿಗಳನ್ನು ಶೀಘ್ರ ಬಂಧಿಸಿ ಸಿಕ್ಷೆ, ಸಿಎಂ ಬೊಮ್ಮಾಯಿ

'ಹಿಜಾಬ್ ಹಿಂದಿನ ಶಕ್ತಿಗಳೇ ಪ್ರವೀಣ್ ಕೊಲೆ ಹಿಂದೆ. ಸೈದ್ಧಾಂತಿಕವಾಗಿ ಭಿನ್ನಾಭಿಪ್ರಾಯ ಇದ್ದರೆ ಹೋರಾಟ ಮಾಡಲಿ, ಹತ್ಯೆ ಮಾಡಿದ್ರೆ ಸುಮ್ಮನಿರಲ್ಲ. ಕೇರಳ ಪೊಲೀಸರ ಜೊತೆ ಸಂಪರ್ಕದಲ್ಲಿದ್ದೇವೆ. ಎಡಿಜಿಪಿ ನೇತೃತ್ವದಲ್ಲಿ ತನಿಖೆ ನಡೆಸ್ತೇವೆ. ಪ್ರವೀಣ್ ಹಂತಕರನ್ನು ಬಂಧಿಸುತ್ತೇವೆ. ಪಕ್ಷದ ಕಾರ್ಯಕರ್ತರು ಉದ್ವೇಗಗೊಂಡಿದ್ದಾರೆ. ಎಲ್ಲರೂ ಶಾಂತಿ ಕಾಪಾಡಿ' ಎಂದು ಮನವಿ ಮಾಡಿದ್ದಾರೆ. 

Video Top Stories