Asianet Suvarna News Asianet Suvarna News

BPL ಕಾರ್ಡ್‌ದಾರರೇ ಗಮನಿಸಿ, ಮನೆಯಲ್ಲಿ ಫ್ರಿಡ್ಜ್, ಬೈಕ್ ಇದ್ದರೆ ಕಾರ್ಡ್ ರದ್ದು..!

ಆರ್ಥಿಕವಾಗಿ ಸ್ಥಿತಿವಂತರಾದವರು ಅನಧಿಕೃತವಾಗಿ ಪಡೆದುಕೊಂಡಿರುವ ಬಿಪಿಎಲ್‌ ಪಡಿತರ ಚೀಟಿಗಳನ್ನು ಸ್ವಯಂಪ್ರೇರಣೆಯಿಂದ ಇಲಾಖೆಗೆ ಹಿಂದಿರುಗಿಸಲು ಮತ್ತೊಮ್ಮೆ 15 ದಿನಗಳ ಕಾಲಾವಕಾಶ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಿದ್ಧತೆ ನಡೆಸಿದೆ.

ಬೆಂಗಳೂರು (ಫೆ. 15): ಆರ್ಥಿಕವಾಗಿ ಸ್ಥಿತಿವಂತರಾದವರು ಅನಧಿಕೃತವಾಗಿ ಪಡೆದುಕೊಂಡಿರುವ ಬಿಪಿಎಲ್‌ ಪಡಿತರ ಚೀಟಿಗಳನ್ನು ಸ್ವಯಂಪ್ರೇರಣೆಯಿಂದ ಇಲಾಖೆಗೆ ಹಿಂದಿರುಗಿಸಲು ಮತ್ತೊಮ್ಮೆ 15 ದಿನಗಳ ಕಾಲಾವಕಾಶ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಿದ್ಧತೆ ನಡೆಸಿದೆ.

ಗಂಡನಿಗೆ ಬುದ್ಧಿ ಕೊಟ್ಟು, ನನ್ನ ಜೊತೆ ಸಂಸಾರ ಮಾಡಲು ಬುದ್ಧಿಕೊಡು ಎಂದು ದೇವರಿಗೆ ಪತ್ರ ಬರೆದ ಪತ್ನಿ..!

 ಮನೆಯಲ್ಲಿ ಮೋಟಾರ್ ಸೈಕಲ್, ಟಿವಿ, ಫ್ರಿಡ್ಜ್ ಇದ್ದರೆ, ಕುಟುಂಬದಲ್ಲಿ ಸರ್ಕಾರಿ ನೌಕರಿದಾರರು, ಅರೆ ಸರ್ಕಾರಿ ನೌಕರರು ಇರುವಂತಹ ಕುಟುಂಬಗಳು, ಆದಾಯ ತೆರಿಗೆಯನ್ನು ಪಾವತಿಸುವ ಕುಟುಂಬಗಳು, ಕುಟುಂಬವು ಈ ವಿಳಾಸದಲ್ಲಿ ವಾಸವಿಲ್ಲದಿರುವುದು. ಒಂದೇ ಮನೆಯಲ್ಲಿ ವಾಸವಿದ್ದು, ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿರುವುದು. 7.5 ಎಕರೆಗಿಂತ ಹೆಚ್ಚಿನ ಡಿ ವರ್ಗದ ಅಥವಾ ತತ್ಸಮಾನ ಭೂಮಿ ಹೊಂದಿರುವುದು. ವಾರ್ಷಿಕ 1.20 ಲಕ್ಷ ಕ್ಕಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳಿಗೆ ಬಿಪಿಎಲ್ ಕಾರ್ಡನ್ನು ರದ್ದುಗೊಳಿಸಲಾಗುವುದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

 

Video Top Stories