ಹತ್ಯೆಯಾದ ಹರ್ಷ ಮನೆಗೆ ಬಿಎಸ್​ವೈ ಭೇಟಿ: 25 ಲಕ್ಷ ರೂ. ಪರಿಹಾರ ವಿತರಣೆ

ಇತ್ತೀಚೆಗೆ ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆ(Harsha Murder Case)ಯಾದ ಹಿಂದೂಪರ ಸಂಘಟನೆ ಕಾರ್ಯಕರ್ತ ಹರ್ಷ ಮನೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ(BS Yediyurappa) ಭೇಟಿ ನೀಡಿದರು. 

First Published Mar 6, 2022, 7:39 PM IST | Last Updated Mar 6, 2022, 7:39 PM IST

ಶಿವಮೊಗ್ಗ, (ಮಾ.06): ಇತ್ತೀಚೆಗೆ ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆ(Harsha Murder Case)ಯಾದ ಹಿಂದೂಪರ ಸಂಘಟನೆ ಕಾರ್ಯಕರ್ತ ಹರ್ಷ ಮನೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ(BS Yediyurappa) ಭೇಟಿ ನೀಡಿದರು. 

ಹರ್ಷ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಿಎಸ್​ವೈ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.  ಸರ್ಕಾರದ ವತಿಯಿಂದ ಘೋಷಿಸಲಾಗಿದ್ದ 25 ಲಕ್ಷ ರೂ. ಪರಿಹಾರದ ಚೆಕ್ ಅನ್ನು ಹರ್ಷ(Bajrang Dal Activist) ಕುಟುಂಬಸ್ಥರಿಗೆ ಬಿಎಸ್ ವೈ ಹಸ್ತಾಂತರ ಮಾಡಿದರು. 

Harsha Murder Case: ಎನ್‌ಐಎ ವಹಿಸಿ: ಕೇಂದ್ರ ಸಚಿವೆ ಕರಂದ್ಲಾಜೆ

ಬಳಿಕ ಮಾತನಾಡಿದ ಅವರು, ಭಜರಂಗದಳ ಸಂಘಟನೆ ಕಾರ್ಯಕರ್ತ ಹರ್ಷ ಹತ್ಯೆ ನಡೆದಿರುವುದು ಖಂಡನೀಯ. ಹಿಂದೂ ಸಮಾಜದ ಮುಖಂಡನಾಗಿ ಬೆಳೆಯುತ್ತಿದ್ದ ಹರ್ಷನ ಬೆಳವಣಿಗೆಯನ್ನು ಸಹಿಸಲಾಗದೆ ಕೊಲೆ ಮಾಡಲಾಗಿದೆ. ಯಾರ ತಂಟೆಗೂ ಹೋಗದೆ ತನ್ನ ಪಾಡಿಗೆ ತಾನು ಸಂಘಟನಾ ಕೆಲಸ ಮಾಡುತ್ತಿದ್ದ ಹರ್ಷರನ್ನು ಕೊಲೆ ಮಾಡಿರುವುದು ದುಃಖದ ವಿಷಯವೆಂದು ಬೇಸರ ವ್ಯಕ್ತಪಡಿಸಿದರು.  

Video Top Stories