Asianet Suvarna News Asianet Suvarna News

ಕಂಬಳ ವೀರನಿಗೆ ಚೆಕ್ ಬದಲು ಖಾಲಿ ಕವರ್ ; ಸಿಟಿ ರವಿ ಎಡವಟ್ಟು!

ಕಂಬಳ ವೀರ ಶ್ರೀನಿವಾಸ್‍ಗೌಡರನ್ನು  ವಿಧಾನಸೌಧಕ್ಕೆ ಕರೆಸಿಕೊಂಡ ಸಿಎಂ ಯಡಿಯೂರಪ್ಪ, ಸನ್ಮಾನ ಮಾಡಿದ್ದಾರೆ. ಸನ್ಮಾನ ವೇಳೆ ಕೊಂಚ ಎಡವಟ್ಟಾಗಿದೆ.  

ಬೆಂಗಳೂರು (ಫೆ. 18: ಕಂಬಳ ವೀರ ಶ್ರೀನಿವಾಸ್‍ಗೌಡರನ್ನು ವಿಧಾನಸೌಧಕ್ಕೆ ಕರೆಸಿಕೊಂಡ ಸಿಎಂ ಯಡಿಯೂರಪ್ಪ ಸನ್ಮಾನ ಮಾಡಿದ್ದಾರೆ. 

ಸನ್ಮಾನದ ಬಳಿಕ ಚೆಕ್ ವಿತರಿಸುವಂತೆ ಸೂಚಿಸಿ ಸಿಎಂ ಅಲ್ಲಿಂದ ನಿರ್ಗಮಿಸಿದರು. ಆದರೆ ಚೆಕ್ ಬರುವುದು ತಡವಾದ ಕಾರಣ ಶ್ರೀನಿವಾಸ್ ಗೌಡರಿಗೆ ಖಾಲಿ ಕವರ್ ನೀಡಿ ಸಚಿವರಾದ ಸಿಟಿ ರವಿ ಮತ್ತು ಶಿವರಾಮ್ ಹೆಬ್ಬಾರ್ ಪೋಸ್ ನೀಡಿದರು.

ಕೆಸರು ಗದ್ದೆಯಲ್ಲಿ ಓಡಿದ ಕಂಬಳ ವೀರ ವಿಧಾನಸೌಧದಲ್ಲಿ ಮಿಂಚಿಂಗ್

ಇದು ಖಾಲಿ ಕವರ್ ಅಂತಾ ಕೈ ಸನ್ನೆಯಲ್ಲೇ ಸಿಟಿ ರವಿ ತಿಳಿಸುವ ಪ್ರಯತ್ನ ಮಾಡಿದರು. ಅರ್ಧಗಂಟೆ ಬಳಿಕ ಕಾರ್ಮಿಕ ಇಲಾಖೆ ಅಧಿಕಾರಿಗಳು ಶ್ರೀನಿವಾಸ್ ಗೌಡರಿಗೆ 3 ಲಕ್ಷ ರೂಪಾಯಿಯ ಚೆಕ್ ವಿತರಿಸಿದರು.

Video Top Stories