ಮಂಗಳೂರಿಗೆ ಯಡಿಯೂರಪ್ಪ; ಧಾರ್ಮಿಕ ಮುಖಂಡರ ಜೊತೆ ಸಭೆ
ಸಿಎಂ ಬಿ.ಎಸ್. ಯಡಿಯೂರಪ್ಪ ನಾಳೆ (ಶನಿವಾರ) ಮಂಗಳೂರಿಗೆ ಭೇಟಿ ನೀಡಲಿದ್ದು, ಅಲ್ಲಿನ ಧಾರ್ಮಿಕ ಮುಖಂಡರು, ಅಧಿಕಾರಿಗಳು ಮತ್ತು ರಾಜಕೀಯ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ.
ಬೆಂಗಳೂರು (ಡಿ.20): ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಇಬ್ಬರು ಪೊಲೀಸ್ ಗೋಲಿಬಾರ್‌ನಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಕರಾವಳಿ ನಗರ ಮಂಗಳೂರು ಪ್ರಕ್ಷುಬ್ಧವಾಗಿದೆ. ನಗರ ವ್ಯಾಪ್ತಿಯಲ್ಲಿ ಕರ್ಫ್ಯೂ ಹೇರಲಾಗಿದ್ದು, ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಿಲಾಗಿದೆ.
ಸಿಎಂ ಬಿ.ಎಸ್. ಯಡಿಯೂರಪ್ಪ ನಾಳೆ (ಶನಿವಾರ) ಮಂಗಳೂರಿಗೆ ಭೇಟಿ ನೀಡಲಿದ್ದು, ಅಲ್ಲಿನ ಧಾರ್ಮಿಕ ಮುಖಂಡರು, ಅಧಿಕಾರಿಗಳು ಮತ್ತು ರಾಜಕೀಯ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ.