ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ: ಲಾಕ್‌ಡೌನ್ ಮುಂದುವರಿಕೆ ಬೇಕಾ..?ಬೇಡ್ವಾ..?
ಇಂದು ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ|ರಾಜ್ಯದಿಂದ ನಿರ್ಣಯ ತೆಗೆದುಕೊಳ್ಳುವ ನಿಟ್ಟಿನಲ್ಲಿ ಸಂಪುಟ ಸಭೆ|ಕಳೆದ 10 ದಿನಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ|
ಬೆಂಗಳೂರು(ಮೇ.28): ಲಾಕ್‌ಡೌನ್ 5.0 ಬಗ್ಗೆ ಚರ್ಚೆ ನಡೆಸಲು ಇಂದು(ಗುರುವಾರ) ಸಂಜೆ 4 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ಕೇಂದ್ರದಿಂದ ಇನ್ನೂ ಮಾರ್ಗಸೂಚಿಗಳು ಬರಬೇಕಿದೆ. ಇದರ ನಡುವೆಯೇ ರಾಜ್ಯದಿಂದ ನಿರ್ಣಯ ತೆಗೆದುಕೊಳ್ಳುವ ನಿಟ್ಟಿನಲ್ಲಿ ಸಂಪುಟ ಸಭೆ ನಡೆಯಲಿದೆ. ಹೀಗಾಗಿ ಈ ಸಭೆ ಮಹತ್ವ ಪಡೆದುಕೊಂಡಿದೆ.
ದೇಶದ ಆರ್ಥಿಕತೆ ಮೇಲೆತ್ತಲು 50 ಲಕ್ಷ ಕೋಟಿ ರುಪಾಯಿಗಳು ಬೇಕು..!
ಕಳೆದ 10 ದಿನಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದೆಲ್ಲವನ್ನ ಗಮನದಲ್ಲಿಟ್ಟುಕೊಂಡು ಇಂದಿನ ಸಭೆಯಲ್ಲಿ ಚರ್ಚೆ ನಡೆಯಲಿದೆ. ಲಾಕ್‌ಡೌನ್‌ಗೆ ಸಂಬಂಧಿಸಿದಂತೆ ಕೆಲವೊಂದು ಮಹತ್ವದ ತೀರ್ಮಾನಗಳನ್ನ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
"