ದತ್ತಪೀಠ: ಸಚಿವ ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ಮುಂದಿನ ಕ್ರಮ ಚರ್ಚೆಗೆ ಉಪಸಮಿತಿ ರಚನೆ

- ದತ್ತಪೀಠ: ಮುಂದಿನ ಕ್ರಮ ಚರ್ಚೆಗೆ ಉಪಸಮಿತಿ ರಚನೆ- ಸಚಿವ ಮಾಧುಸ್ವಾಮಿ ಅಧ್ಯಕ್ಷತೆಯ ಸಮಿತಿಗೆ ಸಚಿವ ಅಶೋಕ್‌, ಶಶಿಕಲಾ ಜೊಲ್ಲೆ, ಸುನೀಲ್‌ ಕುಮಾರ್‌ ಸದಸ್ಯರು- ದತ್ತಪೀಠ ಪೂಜೆಗೆ ಮೌಲ್ವಿ ನೇಮಕ ರದ್ದುಪಡಿಸಿದ್ದ ಹೈಕೋರ್ಟ್‌

Share this Video
  • FB
  • Linkdin
  • Whatsapp

ಬೆಂಗಳೂರು (ಅ. 06): ತೀವ್ರ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದ ದತ್ತ ಪೀಠದ ಪೂಜೆಗೆ ಮೌಲ್ವಿ ಅವರ ನೇಮಕ ಆದೇಶವನ್ನು ಹೈಕೋರ್ಟ್‌ ರದ್ದು ಮಾಡಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬಹುದಾದ ಮುಂದಿನ ನಿರ್ಣಯಗಳ ಬಗ್ಗೆ ಚರ್ಚಿಸಲು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿ ರಚನೆ ಮಾಡಲು ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ.

ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಕಂದಾಯ ಸಚಿವ ಆರ್‌.ಅಶೋಕ್‌, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್‌ ಕುಮಾರ್‌ ಮತ್ತು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಸಮಿತಿಯ ಸದಸ್ಯರಾಗಿರಲಿದ್ದಾರೆ.

Related Video