Asianet Suvarna News Asianet Suvarna News

ಪಿಎಸ್‌ಐ ಮರುಪರೀಕ್ಷೆ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು, ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ

ಪಿಎಸ್‌ಐ ಮರುಪರೀಕ್ಷೆ ವಿರುದ್ಧ ವಿದ್ಯಾರ್ಥಿಗಳು ರೊಚ್ಚಿಗೆದ್ದಿದ್ದು, ಮರುಪರೀಕ್ಷೆ ರಾಜ್ಯಕ್ಕೆ ತಲೆ ನೋವಾಗಿ ಪರಿಣಮಿಸಿದೆ. ಈ ಬೆನ್ನಲ್ಲೇ ಮರು ಪರೀಕ್ಷೆ ವಿರೋಧಿಸಿ ಫ್ರೀಡಂ ಪಾರ್ಕಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
 

First Published Apr 30, 2022, 6:37 PM IST | Last Updated Apr 30, 2022, 6:37 PM IST

ಬೆಂಗಳೂರು (ಏ.30): ರಾಜ್ಯ ಸರ್ಕಾರಕ್ಕೆ ಪಿಎಸ್ ಐ (PSI) ಮರು ಪರೀಕ್ಷೆ (Re Exam) ದೊಡ್ಡ ತಲೆನೋವಾಗಿ ಪರಿಣಮಿಸಲಿದೆ. ಪೊಲೀಸ್ ಸಬ್ ಇನ್ಸ್ ಪೆಕ್ಟರ್ (Police  sub-inspector ) ಮರುಪರೀಕ್ಷೆಗೆ ವಿದ್ಯಾರ್ಥಿಗಳು ರೊಚ್ಚಿಗೆದ್ದಿದ್ದು, ಮರುಪರೀಕ್ಷೆ ವಿರೋಧಿಸಿ ಫ್ರೀಡಮ್ ಪಾರ್ಕ್ ನಲ್ಲಿ (Freedom Park) ಪ್ರತಿಭಟನೆ ಆರಂಭಿಸಿದ್ದಾರೆ.

ಪಿಎಸ್ಐ ಹುದ್ದೆಗೆ ನ್ಯಾಯಯುತವಾಗಿ ಓದಿ, ಪರೀಕ್ಷೆ ಬರೆದು ಆಯ್ಕೆಯಾಗಿರುವ ಅಭ್ಯರ್ಥಿಗಳು ಪ್ರತಿಭಟನೆ ಆರಂಭಿಸಿದ್ದಾರೆ. ಮರುಪರೀಕ್ಷೆಯನ್ನು ಸರ್ಕಾರ ರದ್ದು ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮರುಪರೀಕ್ಷೆಯನ್ನು ನಿರ್ಧಾರವನ್ನು ಸರ್ಕಾರ ಪರಿಶೀಲಿಸಬೇಕು ಎಂದು ಪಟ್ಟುಹಿಡಿದ್ದಾರೆ.

ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್ ದಿವ್ಯಾ ಹಾಗರಗಿ ಪೊಲೀಸ್‌ ಬಲೆಗೆ ಬಿದ್ದಿದ್ಹೇಗೆ?

ಅಂದಾಜು 400ಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ನಡೆಸಿದ್ದು, ಹಾಗೇನಾದರೂ ಪ್ರತಿಭಟನೆಗೆ ಸರ್ಕಾರ ಮಣಿಯದೇ ಇದ್ದಲ್ಲಿ, ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.