Asianet Suvarna News Asianet Suvarna News

ಕಾವೇರಿ ವಿವಾದ ಡಿಕೆ ಶಿವಕುಮಾರ್ ಹೆಗಲಿಗಿಟ್ಟು ಸೈಲೆಂಟ್ ಆದ ಸಿದ್ದರಾಮಯ್ಯ!

ಕಾವೇರಿ ವಿವಾದಲ್ಲೂ ಪ್ರಜ್ವಲಿಸಿದ ಡಿಕೆ ಶಿವಕುಮಾರ್-ಸಿದ್ದರಾಮಯ್ಯ ಬಣರಾಜಕೀಯ, ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ಕಾಂಗ್ರೆಸ್ ಆಪರೇಶನ್ ಚುರುಕು, ಸಿದ್ದರಾಮಯ್ಯ ಜಾತ್ಯಾತೀತ ಆರೋಪಕ್ಕೆ ಹೆಚ್‌ಡಿಕೆ ತಿರುಗೇಟು, ಬಿಜೆಪಿ-ಜೆಡಿಎಸ್ ಮೈತ್ರಿ ಬಳಿಕ ಮೊದಲ ಜಂಟಿ ಪ್ರತಿಭಟನೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ಇಲ್ಲಿವೆ.
 

ಕಾವೇರಿ ವಿವಾದದಲ್ಲಿ ಸಿಎಂ ಸಿದ್ದರಾಮಯ್ಯ ಹೆಚ್ಚು ತೊಡಗಿಸಿಕೊಳ್ಳುತ್ತಿಲ್ಲ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಹೇಳಿಕೆಗಳು ವಿರುದ್ಧವಾಗಿದೆ. ಕಾವೇರಿ ವಿವಾದವನ್ನು ಡಿಕೆಶಿ ಹೆಗಲಿಗಿಟ್ಟು ಸಿದ್ದರಾಮಯ್ಯ ಸೈಲೆಂಟ್ ಆಗಿದ್ದಾರೆ ಅನ್ನೋ ಮಾತುಗಳು ಬಲವಾಗಿ ಕೇಳಿಬರುತ್ತಿದೆ. ಈ ಹಿಂದಿನ ಅವಧಿಯಲ್ಲಿ ಸಿದ್ದರಾಮಯ್ಯ ಕಾವೇರಿ ವಿಚಾರದಲ್ಲಿ ಮುತುವರ್ಜಿ ವಹಿಸಿದ್ದರು. ಆದರೆ ಈ ಬಾರಿ ಎಲ್ಲವನ್ನು ಡಿಕೆ ಶಿವಕುಮಾರ್ ಮೇಲೆ ಬಿಟ್ಟಿದ್ದಾರೆ. ಈಗಾಗಲೇ ಬೆಂಗಳೂರು ಬಂದ್ ನಡೆಸಿ ಪ್ರತಿಭಟನೆ ನಡೆಸಲಾಗಿದೆ. ಇದೀಗ ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಸೆ.29 ರಿಂದ ಬೆಳಗ್ಗೆ 6 ರಿಂದ ರಾತ್ರಿ 6 ಗಂಟೆ ವರೆಗೆ ಬಂದ್ ನಡಯಲಿದೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.