ಜಾರಕಿಹೊಳಿ CD ಬಾಂಬ್‌ನಿಂದ ಸರ್ಕಾರಕ್ಕೆ ಮುಜುಗರ: ಸಿಬಿಐ ತನಿಖೆಯಾಗುತ್ತಾ?

ಸಿಬಿಐಗೆ ವಹಿಸಿ ಸಮಗ್ರ ತನಿಖೆ ನಡೆಸುವಂತೆ ಸಿಎಂಗೆ ಮನವಿ ಮಾಡಿದ ಬಾಲಚಂದ್ರ ಜಾರಕಿಹೊಳಿ| ಸಂಪುಟ ಸಭೆಯಲ್ಲಿ ಸರ್ಕಾರದ ನಡೆಯ ಬಗ್ಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ| ಸಚಿವರ ಜೊತೆ ಸಭೆ ನಡೆಸುತ್ತಿರುವ ಸಿಎಂ| 

Share this Video
  • FB
  • Linkdin
  • Whatsapp

ಬೆಂಗಳೂರು(ಮಾ.03): ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಪ್ರಕರಣ ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ತಂದಿದೆ. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿರುವ ಸಿಎಂ ಯಡಿಯೂರಪ್ಪ ಖಾಸಗಿ ಕಾರ್ಯಕ್ರಮವನ್ನ ಮೊಟಕುಗೊಳಿಸಿದ್ದಾರೆ. ಪ್ರಕರಣದ ಸಂಬಂಧ ಸಚಿವರ ಜೊತೆ ಸಿಎಂ ಸಭೆ ನಡೆಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಅವರನ್ನ ಸಿಎಂ ಕರೆಸಿಕೊಂಡಿದ್ದಾರೆ. 

ಸಾಹುಕಾರ್ ಸೀಡಿ ಬಾಂಬ್; ನಿಷ್ಪಕ್ಷಪಾತ ತನಿಖೆ ನಡೆಯಲಿದೆ: ಗೃಹ ಸಚಿವ

ಈ ಪ್ರಕರಣವನ್ನ ಸಿಬಿಐಗೆ ವಹಿಸಿ ಸಮಗ್ರ ತನಿಖೆ ನಡೆಸುವಂತೆ ಬಾಲಚಂದ್ರ ಜಾರಕಿಹೊಳಿ ಸಿಎಂಗೆ ಮನವಿ ಮಾಡಿದ್ದಾರೆ. ಇಂದು ನಡೆಯುವ ಸಂಪುಟ ಸಭೆಯಲ್ಲಿ ಸರ್ಕಾರದ ನಡೆಯ ಬಗ್ಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Related Video