
Tumakuru Bus Accident: ಬಸ್ ಅಪಘಾತಕ್ಕೂ ಮುನ್ನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಪಳವಳ್ಳಿ ಕಟ್ಟೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪಘಾತಕ್ಕೂ ಮೊದಲಿನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ.
ತುಮಕೂರು (ಮಾ, 20): ಪಳವಳ್ಳಿ ಕಟ್ಟೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪಘಾತಕ್ಕೂ ಮೊದಲಿನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. ಈ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ. 25ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಜಿಲ್ಲೆಯ ಸೂಲನಾಯಕನಹಳ್ಳಿಯ ಅಮೂಲ್ಯ(16), ಅಜಿತ್ (18), ಬೆಸ್ತರಹಳ್ಳಿಯ ಶಹನವಾಜ್ (18), ವೈ.ಎನ್.ಹೊಸಕೋಟೆಯ ಕಲ್ಯಾಣ್(18), ದಾದುವಲ್ಲಿ(26), ಹೃಷಿಕಾ(21) ಮೃತರು. ಘಟನೆಗೆ ಸಂಬಂಧಿಸಿ ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.